ಉಡುಪಿ | ಸಾಲಿಗ್ರಾಮ ಪಟ್ಟಣ ಪಂಚಾಯತ್ ನಿಂದ ಅವೈಜ್ಞಾನಿಕ ತೀರ್ಮಾನ, ಘನ ತ್ಯಾಜ್ಯ ಘಟಕಕ್ಕೆ ತೀವ್ರ ವಿರೋಧ

Date:

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಪಾರಂಪಳ್ಳಿ ಗ್ರಾಮದ ಸರ್ವೇ ನಂಬ್ರ 104/24, 25 ರಲ್ಲಿ, ಘನ ತ್ಯಾಜ್ಯ ಘಟಕ ಉದ್ಘಾಟನೆಗೆ ಮುಂದಾಗಿದ್ದು ಸುತ್ತ ಮುತ್ತಲಿನ ಕೃಷಿ ಭೂಮಿ, ಪರಿಸರಕ್ಕೆ ಮಾರಕವಾಗಿ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಘನ ತ್ಯಾಜ್ಯ ಘಟಕ / ಕಸ ವಿಲೇವಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾನಿಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಮತ್ತು ಸಾಲಿಗ್ರಾಮ, ಪಾರಂಪಳ್ಳಿ ಗ್ರಾಮಸ್ಥರು, ಇದೇ ಜಾಗದಲ್ಲಿ ಈ ಹಿಂದೆ ಮೀನು ಸಂಸ್ಕರಣ ಘಟಕವನ್ನು ಪ್ರಾರಂಭಿಸಿದಾಗ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ನಿರ್ಮಾಣದ ಹಂತದಲ್ಲಿದ್ದ ಮೀನು ಸಂಸ್ಕರಣ ಘಟಕವನ್ನು ಮುಚ್ಚಿಸಿದ್ದರು. ಕಾನೂನಿನ ಪ್ರಕಾರ ಸಿ ಆರ್ ಝೆಡ್ ಪ್ರದೇಶದಲ್ಲಿ, ಯಾವುದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇಲ್ಲ, ಹಾಗೆಯೇ ಎಸ್.ಡಬ್ಲ್ಯೂ.ಎಂ ಅಡಿಯಲ್ಲಿ ಕೃಷಿಭೂಮಿಯ ಬಳಿ ತ್ಯಾಜ್ಯ ನಿರ್ವಹಣೆ ಘಟಕ ಮಾಡುವಂತಿಲ್ಲ. ಆದರೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ಸಮೇತ ಈ ಜಾಗ ಖರೀದಿಸಿದ್ದು ಹೇಗೆ, ಇಲ್ಲಿ ಸಂಪೂರ್ಣವಾಗಿ ಅಧಿಕಾರ ದುರುಪಯೋಗ ಹಾಗೂ ದೊಡ್ಡ ಮಟ್ಟದಲ್ಲಿ ರಾಜಕೀಯ ನಾಯಕರ ಸಮೇತ ಭ್ರಷ್ಟಾಚಾರ ನಡೆದಿರುವುದು ಗೋಚರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಲವಾರು ವರ್ಷಗಳ ಹಿಂದೆ ಹಚ್ಚ ಹಸಿರಾಗಿರುವ ಈ ಪ್ರದೇಶ ಈಗ ರೋಗ ರುಜಿನಗಳ ಊರಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ಉದ್ಘಾಟನೆಗೆ ಸಮಯ ನಿಗದಿ ಆಗಿದ್ದು, ಉದ್ಘಾಟನೆಗೆ ಬರುವ ಮುಖ್ಯ ಅತಿಥಿಗಳು ಸಾಲಿಗ್ರಾಮ ಪಟ್ಟಣ ಪಂಚಾಯತ್ ಉದ್ಘಾಟಿಸಲು ಹೊರಟಿರುವ ಎಸ್.ಡಬ್ಲ್ಯೂ.ಎಂ ಘಟಕ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿನ ಸರ್ವೇ ನಂ 104/24, 25 ಜಾಗದ ಭೂ ಪರಿವರ್ತನೆಯಾಗಿಲ್ಲ, ಇ- ಖಾತೆಯೂ ಆಗಿಲ್ಲ. ಆದರೂ ಪಟ್ಟಣ ಪಂಚಾಯತ್ ಭೂಮಿ ಖರೀದಿಸಿದ್ದು, ಕಂದಾಯ ಇಲಾಖೆಯ ಲ್ಯಾಂಡ್ ರೆವೆನ್ಯೂ ಆಕ್ಟ್ 1964 ಅಡಿ ಪ್ರಕಾರ ನಿಯಮ ಉಲ್ಲಂಘನೆ ಮಾಡಿದಂತಾಗಿದೆ. ಸಿ ಆರ್ ಝೆಡ್ ನಿಂದ ಪರವಾನಿಗೆ ಪಡೆಯದೆ ಎಸ್.ಡಬ್ಲ್ಯೂ.ಎಂ ನಿರ್ಮಾಣ (ಘನ ತ್ಯಾಜ್ಯ ಘಟಕ ನಿರ್ಮಾಣ) ಮಾಡಿರುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೇ ಈ ಜಾಗದ ರಸ್ತೆ‌ ಖಾಸಗೀ ವ್ಯಕ್ತಿಗಳಿಗೆ ಸೇರಿದ್ದು, ಸಿಆರ್ಝೆಡ್ ನಿಯಮದಂತೆ ನದಿಯ ಭರತ ರೇಖೆಯಿಂದ 50 ಮೀಟರ್ ಒಳಗಡೆ ಯಾವುದೇ ಚಟುವಟಿಕೆ ನಡೆಸಲು ಕರಾವಳಿ ನಿಯಂತ್ರಣ ವಲಯ ಒಪ್ಪಿಗೆ ನೀಡುವುದಿಲ್ಲ. 2013ರಲ್ಲಿ ಐಎಎಸ್ ಅಧಿಕಾರಿ ಟಿಎಂರೇಜು ಅವರು ಸರ್ವೇ ನಂ 104/24,25 ರಲ್ಲಿದ್ದ ಈ ಹಿಂದಿನ ಕಟ್ಟಡವನ್ನು ಅನಧಿಕೃತ ಕಟ್ಟಡ ಎಂದು ಘೋಷಣೆ ಮಾಡಿದ್ದರು. ಅಲ್ಲದೇ ಕುಂದಾಪುರದ ಜೆಎಂಸಿ ಕೋರ್ಟ್ ಅದನ್ನು ಎತ್ತಿ ಹಿಡಿದು ಹಿಂದಿನ ಕಟ್ಟಡದ ಮಾಲೀಕನಿಗೆ 15 ಸಾವಿರ ದಂಡ ವಿಧಿಸಿತ್ತು. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗಲೇ ಪಟ್ಟಣ ಪಂಚಾಯತ್ ಖರೀದಿ ಮಾಡಿದ್ದು ಕಾನೂನು ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಈಗಾಗಲೇ ಊಳ್ಳೂರು 219/2 ಈ ಸರ್ವೇ ನಂಬರ್ ನಲ್ಲಿ ಕಸ ವಿಲೇವಾರಿ ಮಾಡಬೇಕು ಎಂದು ಸೀನಿಯರ್ ಸಿವಿಲ್ ಕೋರ್ಟ್ ಆದೇಶ ಮಾಡಿದೆ, ಆದರೆ ಅದನ್ನು ಬಿಟ್ಟು ಇಲ್ಲಿ ಘಟಕ ಸ್ಥಾಪನೆಗೆ ಮುಂದಾಗಿರುವುದು ಭ್ರಷ್ಟಾಚಾರ ನಡೆಸಿರುವ ಶಂಕೆ ಮೂಡಿದೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಒಪ್ಪಿಗೆ ಪತ್ರ ಪಡೆಯದೆ ಘನ ತ್ಯಾಜ್ಯ ವಿಲೇವಾರಿ ಮಾಡಲಾಗಿದ್ದು ಇದು ಕಾನೂನು ಪ್ರಕಾರ ಅಪರಾಧವಾಗಿದೆ ಎಂದ ನಾಗೇಂದ್ರ ಪುತ್ರನ್, ಜಾಗ ಖರೀದಿ ಅವ್ಯವಹಾರ ಕುರಿತು ಕರ್ನಾಟಕ ಉಪ ಲೋಕಾಯುಕ್ತರು ತನಿಖೆಗೆ ಆದೇಶ ನೀಡಿದ್ದು ತನಿಖೆ ಪ್ರಗತಿಯಲ್ಲಿದೆ. ಪಟ್ಟಣ ಪಂಚಾಯತ್ ಮೇಲಿನ ಆರೋಪ ಸಾಬೀತಾದರೆ ಭೂ ಅವ್ಯವಹಾರದ ಜೊತೆಗೆ ಸಾರ್ವಜನಿಕರ ಸುಮಾರು 1.8 ಕೋಟಿ ರೂಪಾಯಿ ತೆರಿಗೆ ಹಣ ದುಂದು ವೆಚ್ಚ ಮಾಡಿದಂತೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ. ಜನಪ್ರತಿನಿಧಿಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಿ ನಿರ್ಧಾರಕ್ಕೆ ಬರದೇ ಇದ್ದಲ್ಲಿ ಗ್ರಾಮಸ್ಥರು ಉಗ್ರ ಹೋರಾಟ ನಡೆಸುತ್ತಾರೆ. ಉದ್ಘಾಟನೆಯ ದಿನವೇ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮಹೇಶ್ ಪೂಜಾರಿ, ಸಂತೋಷ್ ಪೂಜಾರಿ, ಅಶೋಕ್ ಪೂಜಾರಿ, ನಾಗರಾಜ್, ಗಣೇಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...