ಉಡುಪಿ | ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಸಮಾಜಮುಖಿ ಬಳಗದ ವತಿಯಿಂದ ಬೆಂಗಳೂರು ಅರೆಮನೆ ರಸ್ತೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ನ.8 ಮತ್ತು 9 ರಂದು ಹಮ್ಮಿಕೊಳ್ಳಲಾಗಿರುವ ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಎ.ಕೋಟ್ಯಾನ್ ಮಂಗಳವಾರ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಕ್ರಿಯಾಶೀಲ ಮನಸ್ಸುಗಳನ್ನು ಒಂದೆಡೆ ಸೇರಿಸಿ ಚರ್ಚಿಸುವ ಉದ್ದೇಶದಿಂದ ಸಮಾಜಮುಖಿ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಕನ್ನಡ ಮುಂದಿರುವ ಸಮಸ್ಯೆ, ಸವಾಲುಗಳನ್ನು ಚರ್ಚಿಸಿ ಅದಕ್ಕೆ ಬೇಕಾಗಿರುವ ಪರಿಹಾರೋಪಾಯಗಳನ್ನು ಕಂಡುಕೊಳ್ಳ ಬೇಕಾಗಿದೆ. ಈ ಸಮ್ಮೇಳನ ಎಲ್ಲ ಸಹಕಾರದೊಂದಿಗೆ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

- Advertisement -

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ಈಶ್ವರ ಭಟ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ವನಿತಾ ಶೆಟ್ಟಿ, ಕನ್ನಡ ಉಪನ್ಯಾಸಕರಾದ ಸುಲೋಚನಾ ಪಚ್ಚನಡ್ಕ, ಸಾಹಿತ್ಯ ಸಂಘದ ಪ್ರತಿನಿಧಿಗಳಾದ ಹಿತ, ಶ್ರೀನಿಧಿ, ಪ್ರಾರ್ಥನ, ಕನ್ನಡ ಉಪನ್ಯಾಸಕ ಮತ್ತು ಸಮಾಜಮುಖಿ ಯುವ ವೇದಿಕೆಯ ಸದಸ್ಯ ರಾಮಾಂಜಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...