ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ, ಒಂದು ವರ್ಷವಾದರೂ ಆರೋಪಿಗಳ ಸುಳಿವು ಇಲ್ಲ, ಸಿಐಡಿಗೆ ಒಪ್ಪಿಸುವಂತೆ ಆಗ್ರಹ

Date:

ಎರಡು ವರ್ಷಗಳ ಹಿಂದೆ ನಡೆದ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯ ದಲಿತ ದಿನಗೂಲಿ ಕಾರ್ಮಿಕ ಕೃಷ್ಣರ ಕಗ್ಗೋಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಹಾಗೂ ಅಂಬೇಡ್ಕರ್ ಆವಾಸ್ ಮತ್ತು ಬಸವ ಇಂದಿರಾ ಆವಾಸ್ ಮನೆ ನಿರ್ಮಾಣ ಸಹಾಯಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಉಡುಪಿ ಜಿಲ್ಲಾ ಸಮಿತಿ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್‌ನಲ್ಲಿ ಕಪ್ಪುಪಟ್ಟಿ ಧರಿಸಿ ಧರಣಿ ಪ್ರತಿಭಟನೆ ನಡೆಸಿದರು.

- Advertisement -
1009678891

ಸಮತಾ ಸೈನಿಕ ದಳದ ಉಡುಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ, “ಸರ್ವರಿಗೂ ಸೂರು, ಗುಡಿಸಲು ರಹಿತ ರಾಜ್ಯ” ಎಂಬ ಘೋಷಣೆಗಳು ಕೇವಲ ಬಾಯಿ ಮಾತಿನಷ್ಟೇ ಉಳಿದಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಎಸ್‌ಸಿ/ಎಸ್‌ಟಿ/ಒಬಿಸಿ ಹಾಗೂ ಅಲ್ಪಸಂಖ್ಯಾತ ಬಡಜನರು ಇಂದಿಗೂ ಟಾರ್ಪಾಲು, ತಗಡು ಶೀಟ್‌, ಮುರುಕಲು ಮನೆಗಳಲ್ಲಿ ಹೀನಾಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...
1009678884

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ವಿಶ್ವನಾಥ ಪೇತ್ರಿ, ಕಳೆದ ಹತ್ತು ವರ್ಷಗಳಿಂದ ಮನೆ ನಿರ್ಮಾಣಕ್ಕೆ ನೀಡುತ್ತಿರುವ 2 ಲಕ್ಷ ರೂ. ಸಹಾಯಧನದಿಂದ ಇಂದಿನ ದುಬಾರಿ ನಿರ್ಮಾಣ ವೆಚ್ಚದಲ್ಲಿ ಮನೆಯ ತಳಹದಿಯನ್ನೇ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಶಿಲೆಕಲ್ಲು, ಕೆಂಪುಕಲ್ಲು, ಸಿಮೆಂಟ್, ಕಬ್ಬಿಣ, ಮರಳು ಹಾಗೂ ಕೂಲಿ ವೆಚ್ಚಗಳು ಹಲವು ಪಟ್ಟು ಏರಿಕೆಯಾಗಿದ್ದರೂ ಸಹಾಯಧನ ಹೆಚ್ಚಳವಾಗಿಲ್ಲ. ಪರಿಣಾಮವಾಗಿ ಗ್ರಾಮ ಪಂಚಾಯತ್‌ ಮಂಜೂರಾತಿ ಪತ್ರ ಪಡೆದ ಹಲವರು ಐದು ವರ್ಷ ಕಳೆದರೂ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

1009671377

ಪ್ರಸ್ತುತ 600 ಚದರ ಅಡಿ ಕಚ್ಚಾ ಮನೆ ನಿರ್ಮಾಣಕ್ಕೂ ಕನಿಷ್ಠ 20 ಲಕ್ಷ ರೂ. ವೆಚ್ಚವಾಗುತ್ತದೆ. ಪಿಟಿಸಿಎಲ್ ಕಾಯ್ದೆ ಹಾಗೂ ಇತರ ತಾಂತ್ರಿಕ ಅಡೆತಡೆಗಳಿಂದ ಗ್ರಾಮೀಣ ಭಾಗದ ಎಸ್‌ಸಿ/ಎಸ್‌ಟಿ ಜನರಿಗೆ ಬ್ಯಾಂಕ್‌ಗಳಿಂದ ಗೃಹಸಾಲ ಪಡೆಯುವುದೂ ಕಷ್ಟವಾಗುತ್ತಿದೆ. ಪಟ್ಟಣದ ಸಮೀಪದ ಭೂಮಿಗೆ ಮಾತ್ರ ಸೀಮಿತ ಪ್ರಮಾಣದಲ್ಲಿ ಸಾಲ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಅರ್ಹರಿಗೆ ಬ್ಯಾಂಕ್‌ಗಳು ಹಿಂದೇಟು ಹಾಕುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ಅವರು ಆರೋಪಿಸಿದರು.

ಪರ್ಯಾಯ ಮಠದ ಸ್ವಾಮಿಗಳ 2 ವರ್ಷದ ಪುರ ಪ್ರವೇಶಕ್ಕೆ 6 ಕೋಟಿ ರೂಪಾಯಿ ನೀಡುವ ಸರ್ಕಾರ ಪರಿಶಿಷ್ಟರ ಸ್ವಂತ ಮನೆ ನಿರ್ಮಾಣಕ್ಕೆ ಕೇವಲ 2 ಲಕ್ಷ ರೂಪಾಯಿ ಎಲ್ಲಿದೆ ಸಮಾನತೆ ? ಬೀದಿ ನಾಯಿಗಳ ಆಶ್ರಯ ನಿವೇಶನಕ್ಕೆ 6 ಎಕ್ರೆ ಭೂಮಿ. ಪರಿಶಿಷ್ಟರ ಆಶ್ರಯ ನಿವೇಶನಕ್ಕೆ ಕೇವಲ 2 ಸೆಂಟ್ಸ್ ಭೂಮಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.

1009678890

ಹೀಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡುವ ಅಂಬೇಡ್ಕರ್ ಆವಾಸ್ ಮನೆ ನಿರ್ಮಾಣ ಸಹಾಯಧನವನ್ನು ಕನಿಷ್ಠ 9 ಲಕ್ಷ ರೂ.ಗಳಿಗೆ ಹಾಗೂ ಒಬಿಸಿ ವರ್ಗಕ್ಕೆ ನೀಡುವ ಬಸವ ಇಂದಿರಾ ಆವಾಸ್ ಸಹಾಯಧನವನ್ನು ಕನಿಷ್ಠ 5 ಲಕ್ಷ ರೂ.ಗಳಿಗೆ ಹೆಚ್ಚಿಸಿ, ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಘೋಷಿಸಿ ಗ್ರಾಮೀಣ ಪ್ರದೇಶದಲ್ಲಿ ತಕ್ಷಣ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ 2024ರ ಮಾರ್ಚ್ 2ರಂದು ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಗುಂಡಿಕ್ಕಿ ಹತ್ಯೆಗೀಡಾದ ಹನೆಹಳ್ಳಿಯ ಕೃಷ್ಣರ ಪ್ರಕರಣದಲ್ಲಿ ಇಂದಿಗೂ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸಿಐಡಿಗೆ ಒಪ್ಪಿಸಬೇಕೆಂದು ಧರಣಿ ವೇಳೆ ಆಗ್ರಹಿಸಲಾಯಿತು.

1009678889

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಧರಣಿ ನಡೆಸಲು ಕಾರ್ಯಕರ್ತರು ಪೂರ್ವ ಘೋಷಣೆ ನೀಡಿದ್ದರೂ, ಪೊಲೀಸರು ಇದಕ್ಕೆ ಅವಕಾಶ ನೀಡದೆ ನಾಯರ್‌ಕೆರೆ ಭಾಗದಲ್ಲೇ ಬೆಳಗ್ಗಿನಿಂದ ಬಿಗು ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು. ಅಜ್ಜರಕಾಡಿನ ಹುತಾತ್ಮ ಚೌಕದಲ್ಲಿ ಒಗ್ಗೂಡಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ಬ್ರಹ್ಮಗಿರಿಯತ್ತ ತೆರಳಿದಾಗ ಪೊಲೀಸರು ತಡೆದು ಮುಂದಕ್ಕೆ ಸಾಗಲು ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

1009679450

ತಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರೂ ಪೊಲೀಸರು ಅನುಮತಿ ನೀಡದ ಹಿನ್ನೆಲೆ, ಕಾಂಗ್ರೆಸ್ ನಾಯಕರನ್ನು ಸ್ಥಳಕ್ಕೆ ಕರೆಸಿ ತಮ್ಮ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರವಾನಿಸುವಂತೆ ಒತ್ತಾಯಿಸಿದರು. ಬಳಿಕ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಮಹಾಬಲ ಕುಂದರ್, ಸುರೇಶ್ ಶೆಟ್ಟಿ ಬನ್ನಂಜೆ, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ ಸೇರಿದಂತೆ ಹಲವು ನಾಯಕರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಅದನ್ನು ಮುಖ್ಯಮಂತ್ರಿಗೆ ಕಳುಹಿಸುವುದಾಗಿ ಭರವಸೆ ನೀಡಿದರು.

1009679451

ಧರಣಿಯಲ್ಲಿ ಸಮತಾ ಸೈನಿಕ ದಳದ ಪದಾಧಿಕಾರಿಗಳಾದ ಗಣೇಶ್ ಸಾಲ್ಯಾನ್, ಜ್ಯೋತಿ ಶಿರಿಯಾರ, ವಿಶ್ವೇಶ್ ಬ್ರಹ್ಮಾವರ, ಸತೀಶ್ ಜನ್ನಾಡಿ, ಗಜೇಂದ್ರ ನಲ್ಲೂರು, ಎ.ಕೆ. ಸುಬ್ರಹ್ಮಣ್ಯ, ರಾಮ ಕೂಟೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...