ಕೋಲಾರ | ಸಂವಿಧಾನದ ಆಶಯ ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ; ಡಾ.ರಾಜಣ್ಣ

Date:

ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು.

- Advertisement -

ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಚಿಂತಾಮಣಿ ಸತ್ವ ಸಂಸ್ಥೆ ಹಾಗೂ ಮಾಲೂರಿನ ಹೊಸ ಚಿಗುರು ಸಂಸ್ಥೆ ಸಹಯೋಗದದಲ್ಲಿ ಶನಿವಾರ ಆಯೋಜಿಸಿದ್ದ “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತ ಅರಿವು” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
ಹೊಸ ಚಿಗುರು ಸಂಸ್ಥೆ12

ಕವಿ ಮತ್ತು ಕನ್ನಡ ಉಪನ್ಯಾಸಕ ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನವೆಂಬುದು ಜನಪದವಾಗಬೇಕು. ಜನರು ಸಂವಿಧಾನವನ್ನು ಸಂಭ್ರಮಿಸಬೇಕು. ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹುಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.

ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಫೆ.10ರಂದು ರೈತ ಸಂಘ ಬೃಹತ್‌ ಪ್ರತಿಭಟನೆ

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ, ಅನ್ಯಾಯ, ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ಹೇಳಿದರು.

ಇದೇ ವೇಳೆ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ನವೀನ್, ಚಲಪತಿ ಹಾಗೂ ಪ್ರದೀಪ್ ತಂಡ “ಭಾರತ ಕಥಾ” ಎಂಬ ವಿಷಯದ ಕುರಿತು ಸಂವಿಧಾನ ಹಾಡುಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಹೊಸ ಚಿಗುರು ಸಂಸ್ಥೆ1

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಬೆಂಗಳೂರು ಉತ್ತರ ವಿವಿ ಸ್ನಾತಕೋತರ ಕೇಂದ್ರದ ನಿರ್ದೇಶಕ ಪ್ರೊ.ಕುಮುದ ಡಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಡಾ.ಗುಂಡಪ್ಪ ದೇವಿಕೇರಿ, ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕರಾದ ಡಾ.ಪಾರ್ವತಿ, ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಸ್ನಾತಕೋತ್ತರ ಕೇಂದ್ರದ ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...