ಚಿಕ್ಕಬಳ್ಳಾಪುರ | ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸಂದೀಪ್‌ ರೆಡ್ಡಿ ಆಯ್ಕೆ

Date:

ಬಿಜೆಪಿ ಪಕ್ಷವು ಸಾಮಾನ್ಯ ಕಾರ್ಯಕರ್ತನಾದ ನನ್ನನ್ನ ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ನೇಮಿಸಿದೆ. ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುತ್ತೇನೆ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸಂದೀಪ್‌ ಬಿ ರೆಡ್ಡಿ ಹೇಳಿದರು.

- Advertisement -

ಚಿಕ್ಕಬಳ್ಳಾಪುರ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ನನ್ನ ತಾಯಿ ಇದ್ದಂತೆ. ಅದಕ್ಕೆ ಯಾವುದೇ ರೀತಿಯ ಚ್ಯುತಿ ಬರದಂತೆ ನೋಡಿಕೊಳ್ಳುತ್ತೇನೆ. ಯಾವುದೇ ಬೇಧ ಭಾವವಿಲ್ಲದೆ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಲ್ಲಾ ಪದಾಧಿಕಾರಿಗಳು ಸೇರಿ ಚುನಾವಣೆ ಪ್ರಕ್ರಿಯೆ ಮೂಲಕ ನನ್ನನ್ನು ಆಯ್ಕೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಮತ್ತು ಪಕ್ಷವನ್ನು ಮುನ್ನಡೆಸುವಂತ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಪಕ್ಷ ನನ್ನ ಮೇಲಿಟ್ಟುರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್‌ ನಾರಾಯಣ್‌ ಮಾತನಾಡಿ, ಹಿಂದಿನ ಆಯ್ಕೆ ಪ್ರಕ್ರಿಯೆಯಂತೆಯೇ ಸಂದೀಪ್‌ ರೆಡ್ಡಿಯವರ ಆಯ್ಕೆಯಾಗಿದೆ. ಮೊದಲಿಗೆ 6 ಜನರ ಪಟ್ಟಿಯಿತ್ತು. ಅದರಲ್ಲಿ ಮೂವರನ್ನು ಆಯ್ಕೆ ಮಾಡಿ ರಾಜ್ಯಕ್ಕೆ ಕಳಿಸಲಾಗಿತ್ತು. ಮಾಜಿ ಶಾಸಕರು, ಮಾಜಿ ಅಧ್ಯಕ್ಷರು, ಮಂಡಲ ಅಧ್ಯಕ್ಷರು ಸೇರಿದಂತೆ ಪಕ್ಷದಲ್ಲಿರುವ ಎಲ್ಲರ ಅಭಿಪ್ರಾಯ ಮತ್ತು ಸಹಮತದೊಂದಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷರ ಆಯ್ಕೆಗೆ ಸಂಸದರ ಅಸಮಾಧಾನವಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಆಗಲಿ ಪಕ್ಷದಲ್ಲಿ ಕಳೆದ 43 ವರ್ಷಗಳಿಂದ ನಡೆದುಕೊಂಡು ಬಂದಿರುವ ಪ್ರಕ್ರಿಯೆ ಮೂಲಕವೇ ಆಯ್ಕೆ ಮಾಡಬೇಕೆ ಹೊರತು ಹೊಸ ರೀತಿಯಲ್ಲಿ ಆಯ್ಕೆ ಮಾಡಲು ಸಾಧ್ಯವಿಲ್ಲ. ರಾಷ್ಟ್ರೀಯ ಅಧ್ಯಕ್ಷರಿಂದ ಭೂತ್ ಮಟ್ಟದವರೆಗೆ ಒಂದೇ ರೀತಿಯ ಪ್ರಕ್ರಿಯೆ ಇರುತ್ತದೆ. ಅದರಂತೆ ಆಯ್ಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪ್ರದೀಪ್‌ ಈಶ್ವರ್ ನಡೆ, ಹಳ್ಳಿ ಜನರ ಕಡೆ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಳಿ ಸೇರಿದಂತೆ ಇತರೆ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...