ಸಂಡೂರು | ಹೊಸದರೋಜಿ ಗ್ರಾಮ ಪಂ. ಪಿಡಿಒ ಅಮಾನತು

Date:

ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ.

- Advertisement -

ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಸಿದ್ಧಲಿಂಗಸ್ವಾಮಿ, ಎಸ್‍ಡಿಎ ಸಿದ್ಧರಾಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಇಬ್ಬರನ್ನೂ ಅಮಾನತುಗೊಳಿಸಿ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಹೊಸದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ನಿಯಮಬಾಹಿರತವಾಗಿ 9/11 ಪ್ರಮಾಣಪತ್ರಗಳನ್ನು ಪಿಡಿಒ ಸಿದ್ದಲಿಂಗಸ್ವಾಮಿ ಮತ್ತು ಎಸ್‌ಡಿಎ ಸಿದ್ದರಾಮ ಅವರು ವಿತರಣೆ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ವಿಚಾರಣೆ ಬಾಕಿ ಇರುವ ಕಾರಣ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಸಿಇಒ ಹ್ಯಾರಿಸ್ ತಿಳಿಸಿದ್ದಾರೆ.

ಪತ್ರಕರ್ತರಿಗೆ ಬೆದರಿಕೆ ಆರೋಪ; ಪಿಡಿಒ ಅಮಾನತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಳ್ಳೋಳ್ಳಿ ಗ್ರಾಮ ಪಂಚಾಯತಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಅವರು ಪತ್ರಕರ್ತ ನಾಗಯ್ಯ ಸ್ವಾಮಿ ಎಂಬವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ದೇವಿಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಚಿತ್ತಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಅಳ್ಕೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಹಾಗೂ ಖರ್ಚು ವೆಚ್ಚದ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಪತ್ರಕರ್ತ ನಾಗಯ್ಯ ಮಾಹಿತಿ ಕೇಳಿದ್ದರು. ಆದರೆ, ಮಾಹಿತಿ ನೀಡದ ಪಿಡಿಒ ದೇವಿಂದ್ರಪ್ಪ ಮಾರ್ಚ್‌ 5ರಂದು ಪತ್ರಕರ್ತನಿಗೆ ಕರೆ ಮಾಡಿ, ‘ಆರ್‌ಟಿಐ ಸಲ್ಲಿಸಿ, ಬ್ಲಾಕ್‌ಮೇಲ್ ಮಾಡ್ತಿದ್ದೀಯಾ? ನಿನ್ನ ವಿರುದ್ಧ ಕೇಸ್‌ ಹಾಕಿ ಜೈಲಿಗೆ ಹಾಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...