ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

Date:

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.

- Advertisement -

ಕೊಪ್ಪಳದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಸಂಗನಹಾಲ ಚಲೋ ಅಂಗವಾಗಿ ಸೆ.17 ರಂದು ಕೊಪ್ಪಳ ಜಿಲ್ಲಾಡಳಿತ ಕಚೇರಿಯಿಂದ ಸಂಗನಹಾಲ ಗ್ರಾಮದವರೆಗೆ ಜಾಥಾ ಹಾಗೂ ಸಂಗನಹಾಲ ಗ್ರಾಮದಲ್ಲಿ ಸೆ.18 ರಂದು ಸೌಹಾರ್ದತೆ ಸಮಾವೇಶ ಹಮ್ಮಿಕೊಳ್ಳಲಾಗಿದೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೊಪ್ಪಳ ಜಿಲ್ಲೆಯನ್ನು ದಲಿತರ ದೌರ್ಜನ್ಯ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಸರ್ಕಾರ ಜಿಲ್ಲೆಯ ದಲಿತರ ಸಮುದಾಯಗಳಿಗೆ ಸೂಕ್ತ ರಕ್ಷಣೆ ಒದಗಿಸುವ ವ್ಯವಸ್ಥೆ ಮಾಡಬೇಕು. ಸ್ವಾಲಂಬಿಗಳಾಗಿ ಬದುಕಲು ಜನರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ಕಲ್ಯಾಣ ಕರ್ನಾಟಕ ಜನರ ಕಲ್ಯಾಣಕ್ಕಾಗಿ ಸರ್ಕಾರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡಬೇಕುʼ ಎಂದರು.

ಮತ ರಾಜಕಾರಣಕ್ಕಾಗಿ ಘೋಷಿಸಿದ ಕಲ್ಯಾಣ ಕರ್ನಾಟಕ ಹೆಸರು ಹಿಂಪಡೆದು ಚಾರಿತ್ರಿಕವಾಗಿ ಸರಿಯಾಗಿರುವ ʼಹೈದರಾಬಾದ ಕರ್ನಾಟಕʼ ಹೆಸರನ್ನು ಪುನರ್ ಘೋಷಣೆಯಾಗಬೇಕು. ಹಳೆ ಹೆಸರು ಈ ಭಾಗದ ಜನರ ವಿಮೋಚನೆಯ ಹೋರಾಟದ ಜತೆಗೆ ತಳಕು ಹಾಕಿಕೊಂಡಿದೆ. ಅಸ್ಪೃಶ್ಯತೆಯ ನಿವಾರಣೆಗೆ ಶಾಶ್ವತ ಪರಿಹಾರವನ್ನು ಹುಡುಕಬೇಕಾಗಿದೆ. ದಲಿತರ ಮೇಲೆ ಹಲ್ಲೆ, ಗಲಭೆಗಳು ನಡೆದಾಗ ಹಲ್ಲೆಗೊಳಗಾದವರ ಮೇಲೆ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ನಿಲ್ಲಬೇಕು. ಈ ಹಿಂದೆ ದಾಖಲಾಗಿರುವ ಎಲ್ಲಾ ಕೌಂಟರ್ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನಾವು ತಲ್ವಾರ್ ಹಿಡಿಯುತ್ತೇವೆ; ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

ಮುಖಂಡರಾದ ಅಲ್ಲಮಪ್ರಭು ಬೆಟ್ಟದೂರು, ಬಸವರಾಜ್ ಶೀಲವಂತರ್, ಮುದ್ದಣ್ಣ ಸಂಗನಹಾಲ, ಶುಕರಾಜ್ ತಾಳಿಕೇರಿ, ವೆಂಕಟೇಶ್ , ಹನುಮೇಶ್, ಸಂಜಯ್ ದಾಸ್ , ಮಹಾಂತೇಶ್ ಕೊತಬಾಳ, ಶಿವಪ್ಪ ಹಡಪದ ಸೇರಿದಂತೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...