ಬಂಟ್ವಾಳ | ಮುಸ್ಲಿಂ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!

Date:

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ.

- Advertisement -

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...
WhatsApp Image 2025 05 02 at 4.44.07 PM
ರೌಡಿಶೀಟರ್ ಸುಹಾಸ್ ಶೆಟ್ಟಿ ಮೃತದೇಹ

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬೊಬ್ಬೆ ಹೊಡೆದು ಮುಸ್ಲಿಂ ಮೀನು ವ್ಯಾಪಾರಿಯನ್ನು ದುಷ್ಕರ್ಮಿಗಳಿಂದ ಕಾಪಾಡಿದ ಹಿಂದೂ ಮಹಿಳೆ

ಘಟನೆಯ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

WhatsApp Image 2025 05 02 at 3.53.00 PM 1

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್‌ ಕಾಮ್‌ಗೆ ಸ್ಪಷ್ಟನೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...