ಉಡುಪಿ | ದಲಿತರ ಬೇಡಿಕೆ ಈಡೇರಿಸುವಲ್ಲಿ ಸರಕಾರಗಳ ನಿರಾಸಕ್ತಿ, ಸಂಜೀವ ಬಳ್ಕೂರು ಆಕ್ರೋಶ

Date:

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ. ದಲಿತರ ಬೇಡಿಕೆ ಕೇವಲ ಬೇಡಿಕೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ದಲಿತರು ಒಗ್ಗಟ್ಟಿನಿಂದ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಉಡುಪಿ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರು ಅವರು ಹೇಳಿದರು.

- Advertisement -

ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಡಿ ಎಚ್ ಎಸ್ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಲಿತರಿಗಾಗಿ ಮೀಸಲಿರಿಸಿದ ಅನುದಾನಗಳನ್ನು ಅನ್ಯ ಉದ್ಧೇಶಕ್ಕೆ ಬಳಸಿ ದ್ರೋಹವೆಸಗುತ್ತಿರುವ ಸರಕಾರ, ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬದೆ ವಂಚಿಸುತ್ತಿದೆ. ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ದಲಿತ ಯುವಕ ಯುವತಿಯರನ್ನು ಉದ್ಯೋಗ ವಂಚಿತರನ್ನಾಗಿಸುತ್ತಿದೆ ಎಂದು ತಿಳಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲಾಗಾರ್ ಅವರು ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ಕಾರ್ಮಿಕರಿಗಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜನಪರ ಹೋರಾಟಗಾರರಾದ ಶ್ರೀರಾಮ ದಿವಾಣ ಅವರು ಸಂಘಟನೆಯ ಅನಿವಾರ್ಯತೆಯ ಬಗ್ಗೆ ತಿಳಿಸಿದರು. ಸಾಮಾಜಿಕ ಹೋರಾಟಗಾರರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಅವರು ಭೂಮಿ ಹಕ್ಕಿನ ಬಗ್ಗೆ ಮಾತನಾಡಿದರು. ಬಳ್ಕೂರು ಗ್ರಾಮ ಪಂಚಾಯತ್ ಸದಸ್ಯೆ ಸುಶೀಲಾ ಬಳ್ಕೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಬಳ್ಕೂರು ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಣ್ಣಪ್ಪ ಬಳ್ಕೂರು ಅವರನ್ನು ಸಂಚಾಲಕರನ್ನಾಗಿಯೂ, ವಿಜಯ ಕುಮಾರ್ ಹಾಗೂ ವಾಸು ಕುದ್ರು ಅವರನ್ನು ಸಹ ಸಂಚಾಲಕರನ್ನಾಗಿಯೂ, ಸುಶೀಲಾ ಬಳ್ಕೂರು ಅವರನ್ನು ಕೋಶಾಧಿಕಾರಿಯನ್ನಾಗಿಯೂ, ರಾಮಚಂದ್ರ, ಪೂರ್ಣಿಮಾ, ಮಂಜುಳಾ, ಶಾಂತಾ, ಪೂರ್ಣಚಂದ್ರ, ಗಂಗಾಧರ, ಮಹೇಶ್, ಲಕ್ಷ್ಮಿ , ನರಸಿಂಹ, ಮಹೇಶ ಸಾಲಿಗ್ರಾಮ ಮಹೇಶ ಬಳ್ಕೂರು, ಕೃಷ್ಣಮೂರ್ತಿ ಅವರನ್ನು ಕಾರ್ಯಕಾರಿಣಿ ಸದಸ್ಯರನ್ನಾಗಿಯೂ ಆಯ್ಕೆಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...