ಸವದತ್ತಿ | ಯಲ್ಲಮ್ಮನ ಗುಡ್ಡದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ: ₹3.68 ಕೋಟಿ ಸೇರ್ಪಡೆ

Date:

Advertisements

ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಪ್ರಖ್ಯಾತ ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿ ಎಣಿಕೆ ಗುರುವಾರ ಪೂರ್ಣಗೊಂಡಿದ್ದು, ಈ ಬಾರಿ ದಾಖಲೆಯ ₹3.68 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಸಾಮಾನ್ಯವಾಗಿ ಪ್ರತಿ ಎಣಿಕೆಯಲ್ಲಿ ₹1 ರಿಂದ ₹1.5 ಕೋಟಿ ವರೆಗೆ ಕಾಣಿಕೆ ಬರುತ್ತಿದ್ದರೆ, ಈ ಬಾರಿ ಇದಕ್ಕೆ ದ್ವಿಗುಣ ಹೆಚ್ಚು ಹಣ ಸೇರಿದೆ ಎನ್ನಲಾಗಿದೆ.

89 ದಿನಗಳ ಎಣಿಕೆ – ಲಕ್ಷಾಂತರ ಭಕ್ತರಿಂದ ದೇಣಿಗೆ
ಈ ಬಾರಿಯ ಎಣಿಕೆಯಲ್ಲಿ ₹3.40 ಕೋಟಿ ನಗದು, ₹20.82 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಪತ್ತೆಯಾಗಿದ್ದು, ಅಮೆರಿಕ, ನೆದರ್‌ಲ್ಯಾಂಡ್ ಸೇರಿದಂತೆ ವಿದೇಶಿ ಕರೆನ್ಸಿಗಳೂ ದೊರೆತಿವೆ. ಬನದ ಹುಣ್ಣಿಮೆ ಹಾಗೂ ಭರತ ಹುಣ್ಣಿಮೆ ಅವಧಿಯಲ್ಲಿ ಅಪಾರ ಭಕ್ತಾದಿಗಳು ಗುಡ್ಡಕ್ಕೆ ಆಗಮಿಸಿದ್ದು, ಕಳೆದ ವರ್ಷ ಬರಗಾಲದ ಪರಿಣಾಮ ಕಡಿಮೆಯಾಗಿದ್ದ ಭಕ್ತರ ಸಂಖ್ಯೆಯಲ್ಲಿ ಈ ಬಾರಿ ಗಂಭೀರ ಹೆಚ್ಚಳ ಕಂಡು ಬಂದಿದೆ. ಸಮೃದ್ಧ ಮಳೆ ಹಾಗೂ ಉತ್ತಮ ಫಸಲು ರೈತರನ್ನು ದೊಡ್ಡ ಸಂಖ್ಯೆಯಲ್ಲಿ ಆಕರ್ಷಿಸಿರುವುದು ಪ್ರಮುಖ ಕಾರಣವಾಗಿದೆ.

ಭಕ್ತರ ಸೌಕರ್ಯಕ್ಕಾಗಿ ಹಣ ಬಳಕೆ
ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಾಲಯದ ಉಳಿತಾಯ ಖಾತೆಗೆ ಜಮೆ ಮಾಡಲಾಗಿದ್ದು, ಭಕ್ತರ ಸೌಲಭ್ಯ ಹಾಗೂ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲಾಗುವುದು. “ಯಲ್ಲಮ್ಮನ ಗುಡ್ಡದ ಆಧುನಿಕೀಕರಣ ಹಾಗೂ ಭಕ್ತರ ಅನುಕೂಲಕ್ಕಾಗಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆ ಕೈಗೊಳ್ಳಲಾಗಿದೆ,” ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದ್ದಾರೆ.

Advertisements

ಈ ಬಗ್ಗೆ ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಗುಡ್ಡದ ಆದಾಯವನ್ನು ಇನ್ನಷ್ಟು ವೃದ್ಧಿಸುವ ಜೊತೆಗೆ, ಭಕ್ತರ ಅನುಕೂಲತೆಗಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ಹುಂಡಿ ಎಣಿಕೆ ಸಂದರ್ಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ, ಮುಜರಾಯಿ ಇಲಾಖೆಯ ಅಧಿಕಾರಿ ಬಾಳೇಶ ಅಬ್ಬಾಯಿ, ದೇವಾಲಯ ಉಪಕಾರ್ಯದರ್ಶಿ ನಾಗರತ್ನಾ ಚೋಳಿನ ಸೇರಿದಂತೆ ಹಲವಾರು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X