ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

Date:

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

- Advertisement -

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸವಣೂರು ಪಟ್ಟಣದ ಸುಭಾಷ್ ಗಡಿಯವರ ಮನೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂಬ ನಿಖರ ಮಾಹಿತಿ ತಿಳಿದು ಕೆ ಆರ್ ಎಸ್ ಕಾರ್ಯಕರ್ತರು ಅದನ್ನ ವಿಡಿಯೋ ಮಾಡಲು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಖಂಡಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರಿಂದ ಕುಪಿತರಾಗಿ ಬಿಜೆಪಿಯ ಕಾರ್ಯಕರ್ತರಾದ ಮಹೇಶ್ ಮುದಗಲ್ ಮತ್ತು ಸಂತೋಷ ಪಾಟೀಲ ಇತರ ಬೆಂಬಲಿಗರೊಂದಿಗೆ ಮಹಿಳೆಯರೆನ್ನದೆ ಹಲವರ ಮೇಲೆ ಹಲ್ಲೆ ಮಾಡಿ, ಗಾಯಗೊಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ಮತ್ತು ಕೆ ಆರ್ ಎಸ್ ನೂರಾರು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ದಬ್ಬಾಳಿಕೆ ದುಡ್ಡು ಹಂಚಿ ಓಟು ಕೊಳ್ಳುವುದನ್ನು ಖಂಡಿಸಿ ಪ್ರತಿಭಟನೆಗಿಳಿದಿದ್ದಾರೆ. ಎಚ್ಚೆತ್ತ ಪೋಲಿಸರು ಲಾಠಿ ಚಾರ್ಜ್ ಮಾಡಿ ಎಲ್ಲರನ್ನೂ ಚದುರಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.

ಪ್ರತಿ ಚುನಾವಣೆಯಲ್ಲಿ ಬೊಮ್ಮಾಯಿಯವರ ಬೆಂಬಲಿಗರಾದ ಸುಭಾಷ್ ಗಡಿಯವರ ಮನೆಯಲ್ಲಿಯೇ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ದುಡ್ಡು ಹಂಚಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶೋಭಾ ನಿಸ್ಸೀಮ್‌ಗೌಡ್ರ ಇವರು ಬಿಜೆಪಿ ಬೊಮ್ಮಾಯಿ ಕಚೇರಿಯಿಂದ ಹಣ ಹಂಚುವುದರಲ್ಲಿ ಪ್ರಮುಖ ಪಾತ್ರಧಾರಿ ಎಂದು ತಿಳಿದುಬಂದಿದೆ. ಎಲ್ಲಾ ಸ್ತ್ರೀ ಶಕ್ತಿ ಸಂಘದವರಿಗೂ ಹಣ ಹಂಚಿರುವ ಆರೋಪ ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...