ಚಿಂತಾಮಣಿ | ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತಾಗಲಿ; ವಸಂತ ಕುಮಾರ್ ಅಭಿಪ್ರಾಯ

Date:

ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕಾರ್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -

ಚಿಂತಾಮಣಿ ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂನ ಎಸ್ಇಎ ವಾಣಿಜ್ಯ ವಿಜ್ಞಾನ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗ, ಜನಪರ ಫೌಂಡೇಷನ್ ಹಾಗೂ ವಿದ್ಯಾಜ್ಯೋತಿ ಕಾಲೇಜು ಸಹಯೋಗದಲ್ಲಿ ಸಾವಿತ್ರಿಭಾಯಿ ಪುಲೆ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ “ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ” ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ಶೋಷಿತ ವರ್ಗದ, ಹಿಂದುಳಿದ ವರ್ಗದ ಯುವಜನರು ಸಾಮಾಜಿಕವಾಗಿ ವೃದ್ಧಿಯಾಗಲು ಉನ್ನತ ಶಿಕ್ಷಣ ಅಗತ್ಯ. ಈ ನಿಟ್ಟಿನಲ್ಲಿ ಸಮಾಜಕಾರ್ಯಕರ್ತರು ಆ ಕಡೆಗೆ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ತಳ ಸಮುದಾಯ, ಹಿಂದುಳಿದ ಸಮುದಾಯಗಳಲ್ಲಿನ ಯುವಜನರಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ, ಹೆಚ್ಚಿನ ಪ್ರಮಾಣದಲ್ಲಿ ಯುವಜನರು ಉನ್ನತ ಶಿಕ್ಷಣಕ್ಕೆ ಒತ್ತು ನೀಡಬೇಕು ಹಾಗೂ ಉನ್ನತ ಹುದ್ದೆಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಹೆಣ್ಣು ಮಕ್ಕಳು ಭವಿಷ್ಯದ ನಾಳೆಗಳಿಗಾಗಿ ಇಂದಿನಿಂದಲೇ ತಯಾರಾಗಬೇಕು. ಅದಕ್ಕಾಗಿ ಶಿಕ್ಷಣವೇ ಪರ್ಯಾಯ ಎಂದು ತಿಳಿಸಿದರು.

ಸಾಮಾಜಿಕ ಹೋರಾಟಗಾರ ನಾಗಪ್ಪ ಮಾತನಾಡಿ, ಸ್ವಾತಂತ್ರ್ಯಪೂರ್ವ ಭಾರತದ ಸಮಾನತವಾದಿ, ಸ್ತ್ರೀವಾದಿ ಮತ್ತು ಸಾಮಾಜಿಕ ಸುಧಾರಣೆಗಳ ಮೊದಲ ಚಾರಿತ್ರಿಕ ಹೆಜ್ಜೆ ಎಂದು ಗುರುತಿಸುವುದಾದರೆ ಅದು ಜ್ಯೋತಿ ರಾವ್ ಫುಲೆ ಮತ್ತು ಸಾವಿತ್ರಿಬಾಯಿ ಪುಲೆ ದಂಪತಿ. ಜ್ಯೋತಿ ರಾವ್ ಫುಲೆಯವರನ್ನು ಭಾರತದ ಸಾಮಾಜಿಕ ಹೋರಾಟಗಳ ತಂದೆ ಎಂದೇ ಇತಿಹಾಸವು ನೆನಪಿಸಿಕೊಳ್ಳುವುದು. ಇಂತಹ ಮಹಾನ್ ಚೇತನದ ಮಡದಿಯಾಗಿ ತನ್ನ ಬಾಳಸಂಗಾತಿಯ ಆಶಯಗಳ ಮಹತ್ವವನ್ನು ಅರಿತುಕೊಂಡು, ಅವುಗಳನ್ನು ತನ್ನ ಜೀವನದ ಮುಖ್ಯ ಗುರಿಯನ್ನಾಗಿಸಿಕೊಂಡು ಬದುಕಿನ ಕೊನೆಯವರೆಗೂ ಮುನ್ನಡೆಸಿದ ಮಹಾನ್ ಚೇತನ ಸಾವಿತ್ರಿಬಾಯಿ ಫುಲೆ ಎಂದು ಹೇಳಿದರು.

ಭಾರತದ ಮೇಲ್ವರ್ಗ ಹಾಗೂ ಊಳಿಗಮಾನ್ಯ ವ್ಯವಸ್ಥೆ ಶೂದ್ರರು ಮತ್ತು ಅಸ್ಪಶ್ಯರು ಕೆಲವರ ಸೇವೆಗೆಂದು ಮಾತ್ರ. ಅಕ್ಷರ, ಸ್ವತಂತ್ರ, ಸಮಾನತೆ, ಸ್ವಾಭಿಮಾನಗಳೆಲ್ಲ ತಳಸಮುದಾಯಗಳಿಗೆ ನಿಷಿದ್ದ, ಎಂಬ ನಿಯಮವನ್ನು ವಿಧಿಸಿದ್ದರು. ಅಂತಹ ಕಾಲದಲ್ಲಿ ಜಾತಿಮನಸ್ಥಿತಿಗಳ ವಿರುದ್ಧ ದೃಢವಾಗಿ ನಿಂತು ಶೂದ್ರಾತಿ ಶೂದ್ರರಿಗೆ ಅಕ್ಷರಾಭ್ಯಾಸ ಮಾಡಿಸಿ ಶಿಕ್ಷಣದ ಹಕ್ಕನ್ನು ಕಲ್ಪಿಸಿಕೊಟ್ಟು, ಸ್ವಾಭಿಮಾನದ ಜ್ಯೋತಿಯನ್ನು ಅಕ್ಷರಗಳ ಮೂಲಕ ನಮ್ಮೆಲ್ಲರೆದೆಗಳಲ್ಲಿ ಬೆಳಗಿಸಿದವರು ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಪುಲೆ ಎಂದು ನುಡಿದರು.

ಮಹಿಳೆಯರಿಗೆ ಶಿಕ್ಷಣವನ್ನು ನೀಡಬೇಕೆಂಬ ಅಗಾಧವಾದ ಆಸೆ ಹೊಂದಿದ್ದ ಜ್ಯೋತಿ ಬಾಪುಲೆ ಮೊದಲು ತನ್ನ ಮಡದಿ ಸಾವಿತ್ರಿಬಾಯಿಗೆ ಅಕ್ಷರಾಭ್ಯಾಸ ಮಾಡಿಸಿ ಅವರ ಮೊದಲ ಗುರುವಾದರು. ಬಾಳಸಂಗಾತಿಯ ಘನ ಉದ್ದೇಶವನ್ನು ಅರಿತ ಸಾವಿತ್ರಿಬಾಯಿ ಅಷ್ಟೇ ಆಸ್ಥೆ ಮತ್ತು ಶ್ರದ್ಧೆಯಿಂದ ಕಲಿತರು. ಕಲಿಕೆಯ ಆಸಕ್ತಿ ಅವರನ್ನು ಭಾರತದ ಶೋಷಿತ ಸಮುದಾಯಗಳ ವಿಮೋಚಕಿಯನ್ನಾಗಿ ಬೆಳೆಸಿತು ಎಂದು ಹೇಳಿದರು.

ಅಂದಿನ ಕಾಲದಲ್ಲಿ ಶಿಕ್ಷಣವನ್ನು ನೀಡುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಅತ್ಯಂತ ನಿಂದನೆ, ನೋವು, ಅವಮಾನದಿಂದಲೇ ಕ್ರಮಿಸಿದ್ದರು. ಪಾಠ ಕಲಿಸಲು ಹೋಗುವ ದಾರಿಯ ಮಧ್ಯೆ ಅವರ ಮೇಲೆ ಕಲ್ಲು, ಮಣ್ಣು, ಸೆಗಣಿ ಎಸೆದರು. ಆದರೂ ಧೃತಿಗೆಡದೇ ಎಲ್ಲವನ್ನೂ ಹಿಮ್ಮೆಟ್ಟಿಸಿ ಬಂಡೆಯಂತೆ ನಿಂತು ಅಕ್ಷರಾಭ್ಯಾಸದ ಕಾರ್ಯವನ್ನು ಮುಂದುವರಿಸಿದರು. ಹೀಗಾಗಿ, ಅವರು ನಮ್ಮೆಲ್ಲರಿಗೂ ಅಕ್ಷರದ ಮಾತೆಯಾಗಿದ್ದಾರೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಬೇರು ಬೆವರು ಕಲಾ ಬಳಗದ ಸೋರಪ್ಪಲ್ಲಿ ಚಂದ್ರಶೇಖರ್ ಹಾಗೂ ಪೆದ್ದೂರು ಮುನಿರಾಜು ಸಾವಿತ್ರಿ ಬಾಯಿ ಪುಲೆ, ಜ್ಯೋತಿ ಬಾಯಿ ಪುಲೆ ಹಾಗೂ ಹಲವು ಸಾಮಾಜಿಕ ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಜೆಡಿಎಸ್‌ ಮುಖಂಡನ ಕೊಲೆ

ವೇದಿಕೆಯಲ್ಲಿ ವಿದ್ಯಾಜ್ಯೋತಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಉಪನ್ಯಾಸಕರಾದ ಸ್ವಾಮಿ, ಎಸ್‌ಇಎ ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಅರ್ಪಿತಾ, ವಿನೋಧಶ್ರೀ, ಬಾಬುರೆಡ್ಡಿ, ಜನಪರ ಫೌಂಡೇಷನ್ ನ ಯುವಯಾನ ಬಳಗದ ಅಕ್ಷಯ್, ಗಂಗೋತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...