ರಾಯಚೂರು | ಶಾಲಾ ಕಟ್ಟಡ ಕಾಮಗಾರಿ ಅಪೂರ್ಣ : ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಕೂಡಲೇ ಪೂರ್ಣಗೊಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಶಾಲೆಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು.

- Advertisement -

ʼ2021-22ರಲ್ಲಿ ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಅವರು ಕೆಕೆಆರ್‌ಡಿಬಿ ಯೋಜನೆಯಡಿ 5 ಶಾಲಾ ಕೋಣೆಗಳ ನಿರ್ಮಾಣಕ್ಕೆ 50 ಲಕ್ಷ ರೂಪಾಯಿ ಮಂಜೂರು ಮಾಡಿದ್ದರು. ಜಿಲ್ಲಾ ಪಂಚಾಯತಿಯಿಂದ ಗುತ್ತಿಗೆ ಪಡೆದ ಅಮರಗುಂಡಪ್ಪ ಮೇಟಿ ಎಂಬುವರು 2 ವರ್ಷ ಕಳೆದರೂ 3 ಕೊಠಡಿ ನಿರ್ಮಿಸಿ ಉಳಿದ 2 ಕೊಠಡಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ʼಎರಡು ವರ್ಷ ಕಳೆದರೂ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಮಸ್ಥರು ಜಿಲ್ಲಾ ಪಂಚಾಯತಿ ಉಪವಿಭಾಗದ ಎಇಇ ಅವರನ್ನು ವಿಚಾರಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಈ ಬಗ್ಗೆ ನಾನೇನು ಮಾಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆʼ ಎಂದು ಗ್ರಾಮಸ್ಥರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪೋಕ್ಸೊ ಪ್ರಕರಣ | ಮಂಜಪ್ಪನಂಥವರು ಶಾಲೆ ನಡೆಸಲು ಯೋಗ್ಯರೇ?; ಸರ್ಕಾರ ʼವನಶ್ರೀ ವಿದ್ಯಾಲಯʼಕ್ಕೆ ಶಾಶ್ವತ ಬೀಗ ಹಾಕಲಿ

ವಿದ್ಯಾರ್ಥಿಗಳಿಗೆ ಕೂರಲು ತರಗತಿ ಕೋಣೆ ಇಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿಗಳು, ಗ್ರಾಮಸ್ಥರು ಶಾಲೆಗೆ ಬೀಗ ಜಡೆದು ಪ್ರತಿಭಟಿಸಿದರು. ಶೀಘ್ರವೇ ಅಪೂರ್ಣ ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ಅಪೂರ್ಣ ಕುರಿತು ತನಿಖೆ ನಡೆಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...