ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

Date:

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

- Advertisement -

ಹೇಮಂತ್, ಸುಷ್ಮಿತಾ, ವರ್ಷಿಕಾ, ಸುದೀಪ್, ಹೆಚ್.ಎನ್.ಹಿಮಬಿಂದು, ಸಾನ್ವಿಕಾ, ಲಿಖಿತ, ಶರಣ್ಯ, ಅಶ್ವಿನ್ ಕುಮಾರ್, ಅಶ್ವಿನ್, ತೇಜಸ್, ನಿಹಾನ್ ಅಪಘಾತದಲ್ಲಿ ಗಾಯಗೊಂಡಿರುವ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಕಡೆಯಿಂದ ಬಂದ ಸತ್ಯಸಾಯಿ ಶಾಲಾ ವಾಹನವು ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕನ ಅಜಾಗರೂಕ ಚಾಲನೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳು ಮಕ್ಕಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಇಓ ವೆಂಕಟೇಶಪ್ಪ, ಶಿಕ್ಷಣ ಸಮನ್ವಯಾಧಿಕಾರಿ ಆರ್.ವೆಂಕಟರಾಮ್, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ರಂಗನಾಥ್, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಸರ್ವೀಸ್ ರಸ್ತೆ ನಿರ್ಮಿಸಲು ಒತ್ತಾಯ : ಘಟನೆಯನ್ನು ಕುರಿತು ಪ್ರತಿಕ್ರಿಯಿಸಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ಸೋಮಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ ಪಕ್ಕದ ಶಾಲೆ, ಗ್ರಾಮಗಳಿಗೆ ಸರ್ವೀಸ್ ರಸ್ತೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ ಈ ಭಾಗದಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸದೆ ನಿರ್ಲಕ್ಷ್ಯಿಸಲಾಗಿದ್ದು, ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ. ಕೂಡಲೇ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...