ಬೀದರ್‌ನಲ್ಲಿ ಸ್ಕೌಟ್ಸ್, ಗೈಡ್ಸ್ ಕಲರವ; ಕಲ್ಯಾಣ ಕರ್ನಾಟಕ ಪ್ರಥಮ ಜಾಂಬೊರೇಟ್ ಆರಂಭ

Date:

ಐದು ದಿನಗಳ ಕಲ್ಯಾಣ ಕರ್ನಾಟಕದ ಪ್ರಥಮ ಜಾಂಬೊರೇಟ್ ಪರಂಪರೆ ನಗರ ಬೀದರ್‌ನಲ್ಲಿ ಗುರುವಾರ
ಆರಂಭಗೊಂಡಿತು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ವತಿಯಿಂದ ಹಮ್ಮಿಕೊಂಡ ಜಾಂಬೊರೇಟ್‌ನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಲರವ ಕಂಡು ಬಂದಿತು.

- Advertisement -

ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಪರಿಸರದಲ್ಲಿ ತೆರೆದ ಜೀಪ್‌ನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮುಖರ ಮೆರವಣಿಯೊಂದಿಗೆ ಜಾಂಬೊರೇಟ್ ಚಟುವಟಿಕೆಗಳಿಗೆ ಚಾಲನೆ ದೊರಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬ್ಯಾಂಡ್ ಜತೆಗೆ ತೆರೆದ ಜೀಪ್‌ನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ಜಾಂಬೋರೇಟ್ ಮುಖ್ಯಸ್ಥ ಡಾ. ಅಬ್ದುಲ್ ಖದೀರ್, ಹೆಚ್ಚುವರಿ ಮುಖ್ಯಸ್ಥೆ ಗುರಮ್ಮ ಸಿದ್ಧಾರೆಡ್ಡಿ ಅವರ
ಮೆರವಣಿಗೆ ನಡೆಯಿತು. ಸಮವಸ್ತ್ರ ಧರಿಸಿದ್ದ ಸ್ಕೌಟ್ಸ್ ಹಾಗೂ ಗೈಡ್ಸ್ ಗಳು ಗಣ್ಯರ ಮೇಲೆ ಪುಷ್ಪವೃಷ್ಟಿ ಮಾಡಿದರು. ಜಾಂಬೊರೇಟ್ ಗೀತೆ ಹಾಡಿ, ನರ್ತನ ಮಾಡಿ ಸಂಭ್ರಮಿಸಿದರು.

ನೆಹರೂ ಕ್ರೀಡಾಂಗಣದಿಂದ ಮೊಹನ್ ಮಾರ್ಕೆಟ್, ಹಳೆಯ ಬಸ್ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ಜಾಥಾ ಜರುಗಿತು.

shaheen bidar 2
ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

ಕೈಯಲ್ಲಿ ಆಯಾ ಜಿಲ್ಲೆಗಳ ಬ್ಯಾನರ್ ಹಿಡಿದುಕೊಂಡಿದ್ದ ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್‌ ಗಳು ಜಾಂಬೊರೇಟ್ ಗೀತೆ ಹಾಡುತ್ತ ಶಿಸ್ತಿನಿಂದ ಸಾಗಿದರು. ಬ್ಯಾಂಡ್ ಜಾಥಾದ ಮೆರುಗು ಹೆಚ್ಚಿಸಿತು. ವಿದ್ಯಾರ್ಥಿಗಳಿಂದ ಘೋಷವಾಕ್ಯಗಳು ಮೊಳಗಿದವು.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ 3500 ಸ್ಕೌಟ್ಸ್, ಗೈಡ್ಸ್, ರೋವರ್ಸ್ ಹಾಗೂ ರೇಂಜರ್ಸ್‌ ಗಳು ಭಾಗವಹಿಸಿದ್ದರು. ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಜಾಥಾಗೆ
ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

ಜಾಂಬೊರೇಟ್ ನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜುಜಾರೆ, ಕಾರ್ಯದರ್ಶಿ ಕೆ. ಗಂಗಪ್ಪ ಗೌಡ, ಗೈಡ್ ರಾಜ್ಯ ಆಯುಕ್ತೆ ಗೀತಾ ನಟರಾಜ, ಸ್ಕೌಟ್ ಆಯುಕ್ತ ಖಾಲೀದ್, ಕಲಬುರಗಿ ವಿಭಾಗೀಯ ಆಯುಕ್ತ ಸಿ.ಬಿ. ಪಾಟೀಲ ಓಕಳಿ, ಡಾ. ಕುಗ್ಗಲ್ ವೀರೇಶ, ವಿಜಯಸಿಂಗ್, ನಾಗರಾಜ, ಬೇಬಿ ಮ್ಯಾಥ್ಯೂ, ಗಜಾನನ ಮನಿಕೇರಿ, ಜಾಂಬೊರೇಟ್ ಕಾರ್ಯದರ್ಶಿ ಎಚ್.ಬಿ. ಭರಶೆಟ್ಟಿ, ಖಜಾಂಚಿ ತೌಸಿಫ್, ಬಾಬುರಾವ್ ನಿಂಬೂರೆ, ಅನಿಲ್ ಶಾಸ್ತ್ರೀ, ಶಾಮಲಾ ಕೆ.ವಿ. ಕೃಪಾ ವಿಜಯ್, ರಾಮಲತಾ ಮೊದಲಾದವರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...