ಬೀದರ್ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಬುಧವಾರ ಜರುಗಿದೆ.
ಬೀದರ್ ನಗರದ ಚೌಬಾರ ಸಮೀಪದ ನಿವಾಸಿ ಅಹಮ್ಮದ್(50) ಮೃತ ವ್ಯಕ್ತಿ.
ಬುಧವಾರ ಬೆಳಿಗ್ಗೆ ಎಂದಿನಂತೆ ಕಚೇರಿಗೆ ತೆರಳಿ ಕೆಲಸ ನಿರ್ವಹಿಸಿದ್ದರು, ಮಧ್ಯಾಹ್ನ ಏಕಾಏಕಿ ಎದೆಯಲ್ಲಿ ನೋವು ಕಾಣಿಸಿಕೊಂಡು ಕುರ್ಚಿ ಮೇಲಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುರೆಳಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.