ಉಡುಪಿ | ಸಂಘ ಪರಿವಾರದ ಒತ್ತಡಕ್ಕೆ ಮಣಿದು ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು – ಆಸಿಫ್ ಕೋಟೇಶ್ವರ

Date:

ಮೊನ್ನೆ ಉಡುಪಿ ಜಿಲ್ಲೆಯ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಹೊರತಾಗಿಯೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುವ ಹೇಳಿಕೆಯನ್ನು ನೀಡಿ ಗೊಂದಲವನ್ನು ನಿರ್ಮಿಸಿದ್ದರು.

- Advertisement -

ಇದರ ವಿರುದ್ಧ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಕುಂಜಾಲುವಿನ ಘಟನೆ ನಡೆದು ಪೊಲೀಸರು ತನಿಖೆ ಆರಂಭಿಸುವುದಕ್ಕಿಂತ ಮುಂಚೆ ಇಲ್ಲಿಯ ಶಾಸಕರು ಅದನ್ನು ಒಂದು ಸಮುದಾಯದವರ ತಲೆಗೆ ಕಟ್ಟುವ ರೀತಿಯ ಹೇಳಿಕೆಯನ್ನು ನೀಡಿದ್ದರು ಹಾಗೂ ನಂತರ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಮೇಲೂ ಸಂಘ ಪರಿವಾರದ ನಾಯಕ ಇದನ್ನು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಈ ಎಲ್ಲ ಬೆಳವಣಿಗೆಯನ್ನು ಗಮನಿಸುವಾಗ ಇದರ ಹಿಂದೆ ಬಿಜೆಪಿ ಹಾಗೂ ಸಂಘ ಪರಿವಾರ ಇರುವ ಶಂಕೆ ಇದೆ ಆದ್ದರಿಂದ ಪೊಲೀಸರು ಕೂಲಂಕುಶ ತನಿಖೆ ನಡೆಸಬೇಕು ಎಂದಷ್ಟೇ ಹೇಳಿದ್ದರು, ಇಲ್ಲಿ ಅವರು ಯಾವುದೇ ಧರ್ಮದ ವಿರುದ್ಧ ಹೇಳಿಕೆಯನ್ನು ನೀಡಿಲ್ಲ. ಕೇವಲ ಸಂಘ ಪರಿವಾರ ಹಾಗೂ ಬಿಜೆಪಿಯ ವಿರುದ್ಧ ಮಾತನಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಸಂಘ ಪರಿವಾರದ ಒತ್ತಡಕ್ಕೆ ಮಣಿದು ಸರಕಾರ ರಿಯಾಜ್ ಕಡಂಬು ವಿರುದ್ಧ ಪ್ರಕರಣವನ್ನು ದಾಖಲಿಸಿದೆ ನಾವು ಇದರ ವಿರುದ್ಧ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...