ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

Date:

ಚಿಕ್ಕಬಳ್ಳಾಪುರ:-ಕೋಲಾರ ಪಕ್ಕದ ಚಿಕ್ಕಬಳ್ಳಾಪುರದಲ್ಲೂ ಚಿನ್ನದ ನಿಕ್ಷೇಪವಿರೋ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು ಗಡಿಭಾಗದಲ್ಲಿ ಹೈಟೆಕ್ ಸರ್ವೆ ನಡೆಸಲಾಗ್ತಿದೆ. ಆಂಧ್ರದ ಕದಿರಿ ಮತ್ತು ಕರ್ನಾಟಕದ ಗುಡಿಬಂಡೆ ಸುತ್ತಮುತ್ತ ಹೆಲಿಕಾಪ್ಟರ್‌ ಮೂಲಕ ಗುಪ್ತ ನಿಧಿಗಾಗಿ ವಾಯುಗಾಮಿ ಸಮೀಕ್ಷೆ ಮಾಡಲಾಗುತ್ತಿದೆ.

- Advertisement -

ಆಂಧ್ರಪ್ರದೇಶದ ಕದಿರಿ ಮತ್ತು ಕರ್ನಾಟಕದ ಗುಡಿಬಂಡೆ ಸುತ್ತಮುತ್ತ ಹೆಲಿಕಾಪ್ಟರ್ ಮೂಲಕ ವಾಯುಗಾಮಿ ಸಮೀಕ್ಷೆ ನಡೆದಿದೆ. ಮಣ್ಣಿನ ಆಳದಲ್ಲಿ ಅಡಗಿರುವ ಚಿನ್ನದ ಅದಿರು ಪತ್ತೆಯಾದರೆ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಬೂಸ್ಟ್ ಸಿಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಎಸ್‌ಐ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಮತ್ತು ಆಂಧ್ರಪ್ರದೇಶದ ಕದಿರಿ ಪ್ರದೇಶದಲ್ಲಿ ಹೈಟೆಕ್ ಸರ್ವೇ ನಡೆಸುತ್ತಿದೆ. ಹೆಲಿಕಾಪ್ಟರ್ ಮೂಲಕ ವಾಯುಗಾಮಿ ಸಮೀಕ್ಷೆ ಮಾಡಿ, ಭೂಮಿಯ ಆಳದಲ್ಲಿರುವ ಖನಿಜ ಸಂಪತ್ತನ್ನು ಪತ್ತೆಹಚ್ಚುತ್ತಿದ್ದಾರೆ. ಹೈಟೆಕ್ ಸೆನ್ಸಾರ್‌ಗಳನ್ನು ಬಳಸಿ ಭೂಮಿಯ ದತ್ತಾಂಶ ಸಂಗ್ರಹಿಸುತ್ತಿದ್ದಾರೆ. ಇದರಲ್ಲಿ ಚಿನ್ನದ ಅದಿರು ಪತ್ತೆಯಾದರೆ ಹೊಸ ಗಣಿಗಾರಿಕೆ ಆರಂಭವಾಗಬಹುದು.

ಕರ್ನಾಟಕ ಮತ್ತು ಆಂಧ್ರದ ಗಡಿ ಪ್ರದೇಶದಲ್ಲಿ ಭೂಗರ್ಭದಲ್ಲಿ ಚಿನ್ನದ ಸಾಧ್ಯತೆ ಇದೆ ಎಂಬ ಹಿಂದಿನ ಅಧ್ಯಯನಗಳಿಂದ ಸರ್ವೇ ಆರಂಭವಾಗಿದೆ. ಜಿಎಸ್‌ಐಯು ದೇಶದಾದ್ಯಂತ ಖನಿಜ ಸಂಪತ್ತು ಹುಡುಕುವ ಕೆಲಸ ಮಾಡುತ್ತದೆ. ಚಿಕ್ಕಬಳ್ಳಾಪುರದಲ್ಲಿ ಹಿಂದೆಯೂ ಸಣ್ಣ ಪ್ರಮಾಣದಲ್ಲಿ ಚಿನ್ನ ಪತ್ತೆಯಾಗಿತ್ತು. ಇದೀಗ ಹೊಸ ತಂತ್ರಜ್ಞಾನ ಬಳಸಿ ಸರ್ವೇ ನಡೆಯುತ್ತಿದೆ. ಗಡಿ ಪ್ರದೇಶದಲ್ಲಿ ಸಮೀಕ್ಷೆ ಮಾಡಿ, ಎರಡೂ ರಾಜ್ಯಗಳಿಗೆ ಪ್ರಯೋಜನವಾಗುವಂತೆ ಮಾಡುವ ಉದ್ದೇಶ ಇದೆ.

ಒಂದು ವೇಳೆ ಸರ್ವೇಯಲ್ಲಿ ಚಿನ್ನದ ಅದಿರು ಪತ್ತೆಯಾದರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಹೊಸ ಗಣಿಗಾರಿಕೆ ಆರಂಭವಾಗಬಹುದು. ಇದು ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಿ, ರಾಜ್ಯದ ಆರ್ಥಿಕತೆಗೆ ಬೂಸ್ಟ್ ನೀಡುತ್ತದೆ. ದೇಶದ ಚಿನ್ನ ಉತ್ಪಾದನೆ ಹೆಚ್ಚಾಗಿ, ಆಮದು ಕಡಿಮೆಯಾಗುತ್ತದೆ. ಆದರೆ ಪರಿಸರ ಮತ್ತು ನೀರಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು

ಇದನ್ನು ಓದಿದ್ದೀರಾ..? ಕೇಂದ್ರ ಬಜೆಟ್ | ಶ್ರೀಗಂಧ ಬೆಳೆಗೆ ಪ್ರೋತ್ಸಾಹ; ಕೃಷಿ ಉತ್ಪನ್ನ ಎಂದು ಪರಿಗಣಿಸಲು ಶ್ರೀಗಂಧ ಕೃಷಿಕರ ಸಂಘ ಒತ್ತಾಯ

ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆಯ ಜನರು ಸರ್ವೇಯ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಹೆಲಿಕಾಪ್ಟರ್ ಸರ್ವೇ ನೋಡಿ ಕುತೂಹಲ ಹೆಚ್ಚಾಗಿದೆ. ವಿಜ್ಞಾನಿಗಳು ಸಂಗ್ರಹಿಸಿದ ದತ್ತಾಂಶಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕೃತ ವರದಿ ಬಂದ ನಂತರವೇ ಸತ್ಯ ಬಯಲಾಗಲಿದೆ. ಈ ಸರ್ವೇ ಕರ್ನಾಟಕದ ಖನಿಜ ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಚಿನ್ನದ ನಾಡು ಮತ್ತೊಮ್ಮೆ ಹೊಸ ಗಣಿಗಳಿಂದ ಹೊಳೆಯುವ ನಿರೀಕ್ಷೆ ಇದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...