ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ತುಮಕೂರಿನ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶ್ರೀಲಕ್ಷ್ಮೀ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ತುಮಕೂರಿನ ಅಕ್ಕಿ ವ್ಯಾಪಾರಿ ರಾಜು ಹಾಗೂ ಪ್ರಭಾವತಿ ದಂಪತಿಯ ಪುತ್ರಿ ಶ್ರೀಲಕ್ಷ್ಮೀ 600 ಅಂಕಗಳಿಗೆ 596 ಅಂಕ ಪಡೆದಿರುವ ಶ್ರೀಲಕ್ಷ್ಮೀ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಕ್ಕೆ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಅಂದಿನ ಪಾಠ ಅಂದೇ ಓದಿ ಮುಗಿಸಿ, ಅರ್ಥೈಸಿಕೊಂಡು ಓದಿದರೆ ಪರೀಕ್ಷೆ ಸುಲಭವಾಗುತ್ತದೆ. ಮುಂದೆ ಸಿಎ ಓದಬೇಕು ಅಂದುಕೊಂಡಿದ್ದೇನೆ ಎಂದು ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಈದಿನ ಡಾಟ್ ಕಾಮ್ ಗೆ ಪ್ರತಿಕ್ರಿಯಿಸಿದರು.