ದ್ವಿತೀಯ ಪಿಯುಸಿ ಫಲಿತಾಂಶ : ಕೋಲಾರ ವಿದ್ಯಾರ್ಥಿನಿ ಚಿರಂತನ ರಾಜ್ಯಕ್ಕೆ 4ನೇ ಸ್ಥಾನ

Date:

ಕೋಲಾರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ನಿರಂತರ ಪರಿಶ್ರಮ, ದೃಢ ನಿಷ್ಠೆ ಮತ್ತು ಶಿಸ್ತಿನ ಅಧ್ಯಯನದ ಫಲವಾಗಿ ಚಿರಂತನ ಅವರು ಈ ಉನ್ನತ ಸಾಧನೆ ಮಾಡಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಸಾಧನೆಗೆ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು ಸದಸ್ಯರು, ಶಿಕ್ಷಕರು ಮತ್ತು ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೋಲಾರದ ಸಿಎಂಆರ್ ಶ್ರೀನಾಥ್ ಅವರ ಗೃಹ ಕಚೇರಿಗೆ ಚಿರಂತನ ಮತ್ತು ಕುಟುಂಬ ಭೇಟಿ ನೀಡಿ ಫಲಿತಾಂಶವನ್ನು ತಿಳಿಸಿ ಸನ್ಮಾನ ಸ್ವೀಕರಿಸಿದರು. ಚಿರಂತನ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದಾಗ ಸನ್ಮಾನಿಸಿದ್ದನ್ನ ಶ್ರೀನಾಥ್ ಮರೆಸಿಕೊಂಡು ಯು ಪಿ ಎಸ್ ಸಿ ಸಾಧಕೀಯ ಆಗುವ ಹಾದಿಯಲ್ಲಿ ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಸಿ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಕೆ.ಎಸ್. ಗಣೇಶ್ ಅವರು ವಿದ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸುಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲಿ ಎಂದು ಆಶಿಸಿದರು.

ಚಿರಂತನ ಅವರ ಈ ಸಾಧನೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಪರಿಣಮಿಸಿದೆ.

ಇದನ್ನು ಓದಿದ್ದೀರಾ..?ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಎಸ್ ಸುಧಾಕರ್ ಚಿರಂತನ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು ತಂಗಿ ಜಾಗೃತಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...