ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

Date:

ಆಗಸ್ಟ್‌/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, karresult.nic.in ಅಂತರ್ಜಾಲ ತಾಣದಲ್ಲಿ ಫಲಿತಾಂಶ ಲಭ್ಯವಿದೆ. ಕಾಲೇಜುಗಳಲ್ಲಿ ಬುಧವಾರ ಬೆಳಗ್ಗೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ 41,961 (ಶೇ 35.21) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

- Advertisement -

ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಗೆ ಒಟ್ಟು 1,21 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 41,961 (ಶೇ 35.21) ವಿದ್ಯಾರ್ಥಿಗಳು ಪಾಸಾಗಿದ್ದಾರೆ. 75,967 ಬಾಲಕರು ಪರೀಕ್ಷೆಗೆ ಹಾಜರಾಗಿದ್ದರು ಇವರ ಪೈಕಿ 24,845 (ಶೇ 32.7)ರಷ್ಟು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ ಎದುರಿಸಿದ 43,216 ಬಾಲಕಿಯರಲ್ಲಿ 17,116 (ಶೇ 39.61) ರಷ್ಟು ಪಾಸಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಲಾ ವಿಷಯದಲ್ಲಿ 61,184 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 22,409 (ಶೇ 36.63) ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಷಯದಲ್ಲಿ 36,279 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇವರಲ್ಲಿ 10,093 (ಶೇ 27.82) ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಷಯದಲ್ಲಿ 21,720 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಇವರಲ್ಲಿ 9,459 (ಶೇ 43.55) ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಶೇ 35.71ರಷ್ಟಿದ್ದರೆ, ಇಂಗ್ಲಿಷ್ ಮಾಧ್ಯಮದವರ ಪ್ರಮಾಣ ಶೇ. 34.4ರಷ್ಟಿದೆ.

“ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಸೆ. 15ರವರೆಗೆ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಯನ್ನು ಸೆ. 16ರಿಂದ 17ರೊಳಗೆ kseab.karnataka.gov.in ಅಂತರ್ಜಾಲ ತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸೆ.12 ಸಂಜೆ 4 ಗಂಟೆ ನಂತರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

“ಸ್ಕ್ಯಾನಿಂಗ್ ಪ್ರತಿ ಪಡೆದವರಿಗೆ ಮಾತ್ರ ಮರು ಮೌಲ್ಯಮಾಪನಕ್ಕೆ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಸ್ಕ್ಯಾನಿಂಗ್ ಪ್ರತಿ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಸೆ. 16ರಿಂದ 18ರವರೆಗೆ ಅವಕಾಶವಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ₹530 ಹಾಗೂ ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ ₹1,670 ಶುಲ್ಕ ಪಾವತಿಸಬೇಕು” ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.

ರಾಜ್ಯದ ಒಟ್ಟು 274 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬೆಂಗಳೂರಿನಲ್ಲಿ 10 ಶಿಬಿರಗಳಲ್ಲಿ ನಡೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...