ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕ ಹಾಗೂ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತು ವಿಚಾರಗೋಷ್ಠಿಯನ್ನು ಮೇ.9ರಂದು ಬೆಳಿಗ್ಗೆ 10:30 ಗಂಟೆಗೆ ಆಯೋಜಿಸಲಾಗಿದೆ.
ಮೈಸೂರು ನಗರದ ಎನ್.ಆರ್. ಮೊಹಲ್ಲಾ ವ್ಯಾಪ್ತಿಯ ರಾಜೇಂದ್ರನಗರದಲ್ಲಿರುವ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಛಾಯಾದೇವಿ ರಂಗಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಿರಿಯ ಪತ್ರಕರ್ತ ಹಾಗೂ ಕತೆಗಾರ ಕೆ. ನರಸಿಂಹಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಲಿದ್ದು, ‘ಕುವೆಂಪು ಅವರ ಶೈಕ್ಷಣಿಕ ಚಿಂತನೆಗಳು’ ಕುರಿತು ನಂಜನಗೂಡು ತಾಲ್ಲೂಕಿನ ದೇವನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಉಮೇಶ್ ಬೇವಿನಹಳ್ಳಿ ವಿಚಾರ ಮಂಡನೆ ಮಾಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ?ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ
ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಿ. ಅಂತೋಣಿ ಪೌಲ್ ರಾಜ್ ಉಪಸ್ಥಿತರಿರುವರು ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸಪ್ಪ ಸಿ. ಸಾಲುಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




