ಜಮಾಅತೆ ಇಸ್ಲಾಮಿ ಹಿಂದ್ ಮುಖಂಡ, ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಕೆ.ಎಂ. ಶರೀಫ್ ನಿಧನ

Date:

ಜಮಾಅತೆ ಇಸ್ಲಾಮಿ ಹಿಂದ್‌ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾಗಿದ್ದ ಮತ್ತು ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಹಿರಿಯ ನಾಯಕ ಕೆ.ಎಂ. ಶರೀಫ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

- Advertisement -

ಮಂಗಳೂರಿನ ಬಂದರ್ ಸಮೀಪದ ಕಂದಕ್‌ನಲ್ಲಿ ಹುಟ್ಟಿ ಬೆಳೆದ ಇವರು, ಸನ್ಮಾರ್ಗ ವಾರ ಪತ್ರಿಕೆಯ ಸ್ಥಾಪಕರಲ್ಲಿ ಓರ್ವರಾಗಿದ್ದರು. ಇವರು ಸನ್ಮಾರ್ಗ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ಇಬ್ರಾಹೀಮ್ ಸಈದ್ ಅವರ ಅಣ್ಣನಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ ಏಕೀಕರಣಕ್ಕೆ 70 ವರ್ಷ: ಕನ್ನಡ ಅನ್ನದ ಭಾಷೆಯಾಗುವುದೆಂದು?

ಕರ್ನಾಟಕ ಏಕೀಕರಣಗೊಂಡು ಈ ವರ್ಷಕ್ಕೆ 70 ವರ್ಷ. ಆದರೆ, ಎಪ್ಪತ್ತು ವರ್ಷಗಳ ಕನ್ನಡ ನಾಡಿನ ನಡೆಯತ್ತ ಒಂದು ನೋಟ ಹರಿಸಿದರೆ ಕಾಣಿಸುವ ಚಿತ್ರವೇ ಬೇರೆಯಾಗಿದೆ. “ಇಷ್ಟು ವರ್ಷವಾದರೂ, ಕನ್ನಡ ಅನ್ನದ ಭಾಷೆಯಾಗಿ ಉಳಿದಿಲ್ಲ....

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ ಮೇಲೆ ಕಾಣುವ ಒಂದೊಂದು ಕ್ಷಣದ ಹಿಂದೆಯೂ ನಿರ್ದೇಶಕ ಮತ್ತು ತಂತ್ರಜ್ಞರ ದೀರ್ಘ ಶ್ರಮ, ಆರ್ಥಿಕ ಮಿತಿಗಳು ಹಾಗೂ ತಾಂತ್ರಿಕ ಸವಾಲುಗಳಿರುತ್ತವೆ....

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಸ್ಥಾನೀಯ ಘಟಕಕ್ಕೆ 20 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಪ್ರಥಮ ಚೇರ್ಮನ್ ಆಗಿಯೂ ಕರ್ತವ್ಯ ನಿಭಾಯಿಸಿದ್ದರು. 1978ರಲ್ಲಿ ಸನ್ಮಾರ್ಗ ಪತ್ರಿಕೆಯನ್ನು ಪ್ರಾರಂಭಿಸುವುದಕ್ಕೆ ಮತ್ತು ಅದರ ಬೆಳವಣಿಗೆಗೆ ಶಕ್ತಿಮೀರಿ ಪ್ರಯತ್ನಿಸಿದವರಲ್ಲಿ ಇವರು ಒಬ್ಬರಾಗಿದ್ದಾರೆ. ಕೆಲವೇ ಕೆಲವು ಗೆಳೆಯರನ್ನ ಒಟ್ಟು ಸೇರಿಸಿ ಪ್ರತಿಯೊಬ್ಬರೂ ತಲಾ 500 ರೂಪಾಯಿಯಂತೆ ಹೂಡಿಕೆ ಮಾಡಿ ಸನ್ಮಾರ್ಗ ಪತ್ರಿಕೆಯನ್ನು ಸ್ಥಾಪಿಸಲಾಗಿತ್ತು ಮತ್ತು ಅದರ ಹಿಂದಿನ ಚಾಲಕ ಶಕ್ತಿಯಾಗಿ ಗುರುತಿಸಿಕೊಂಡಿದ್ದರು.

ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿರುವ ಹಿರಾ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಚೇರ್ಮೆನ್ ಆಗಿದ್ದ ಇವರು ಸಮರ್ಥ ನಾಯಕತ್ವ, ದೂರ ದೃಷ್ಟಿ ಮತ್ತು ಸಂಘಟನಾ ಚಾತುರ್ಯವನ್ನು ಹೊಂದಿದ್ದರು.

ಇವರು ಪತ್ನಿ, ಐದು ಗಂಡು ಮಕ್ಕಳು ಮತ್ತು ಓರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ. ಇವರ ಪುತ್ರರಾದ ಅಷ್ಪಾಕ್ ಅಹಮದ್ ಶರೀಫ್ ಅವರು ಈ ಹಿಂದೆ ಎಸ್ಐಒ ರಾಷ್ಟ್ರಾಧ್ಯಕ್ಷರಾಗಿದ್ದರು. ಹಾಗೆಯೇ ಔರಾ ಮಾಸಿಕದ ಸಂಪಾದಕಿಯಾಗಿರುವ ಸಮೀನಾ ಆಫ್ಶಾನ್ ಇವರ ಮಗಳಾಗಿದ್ದಾರೆ. ಸನ್ಮಾರ್ಗದ ಉಪಸಂಪಾದಕರಾಗಿದ್ದ ಮತ್ತು ಉತ್ತಮ ಬರಹಗಾರರಾಗಿಯೂ ಭಾಷಣಗಾರರಾಗಿಯೂ ಗುರುತಿಸಿಕೊಂಡಿರುವ ಬಿ.ಎಸ್. ಶರ್ಫುದ್ದೀನ್ ಇವರ ಅಳಿಯರಾಗಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ರೈ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಗಡೀಪಾರಿಗೆ ಕ್ರಮ: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ

ಕೆ.ಎಂ. ಶರೀಫ್ ಅವರ ನಿಧನಕ್ಕೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಅಧ್ಯಕ್ಷ ಬೆಳಗಾಮಿ ಮುಹಮ್ಮದ್ ಸಾದ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಅಕ್ಬರ್ ಅಲಿ ಉಡುಪಿ, ನಗರಾಧ್ಯಕ್ಷ ಕೆ.ಎಂ. ಅಶ್ರಫ್, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸಯೀದ್ ಇಸ್ಮಾಈಲ್, ಪ್ರಕಾಶಕ ಅಮೀನ್ ಅಹ್ಸನ್, ಅನುಪಮ ಸಂಪಾದಕಿ ಶಹನಾಝ್ ಎಂ, ಮೌಲಾನಾ ಯಹ್ಯಾ ತಂಙಳ್‌ ಮದನಿ ಸಹಿತ ಅನೇಕರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಅಂತಿಮ ಸಂಸ್ಕಾರ ಕಾರ್ಯವು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ: ಎಲ್.ಎಚ್. ಅರುಣ್‌ ಕುಮಾ‌ರ್

ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ ಇಂದಿನ ಮಕ್ಕಳು ಹೇಗಿರುತ್ತಾರೋ ನಾಳೆ...

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...