ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿ, ಚೇತರಿಸಿಕೊಳ್ಳುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ಅವರು ಬ್ರೈನ್ ಟ್ಯೂಮರ್ ಕಾಯಿಲೆಗೆ ತುತ್ತಾಗಿದ್ದರು. ನಾಲ್ಕು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಚೇತರಿಸಿಕೊಳ್ಳುತ್ತಿದ್ದರು. ಆದರೆ, ಇಂದು ಸಾವನ್ನಪ್ಪಿದ್ದಾರೆ.
ಅವರು ವಿವಿಧ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್‌ಕ್ಲಬ್‌ನಲ್ಲಿ ಸಕ್ರೀಯವಾಗಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಪತ್ರಕರ್ತರ ಆಪತ್ಭಾಂಧವ ನಿಧಿಯಿಂದ ಆರ್ಥಿಕ ನೆರವು ನೀಡುವ ಮೂಲಕ ಅವರು ಗುಣಮುಖರಾಗಲೆಂದು ಪತ್ರಕರ್ತರು ಹಾರೈಸಿದ್ದರು.