ನಾಡಿನ ಹಿರಿಯ ಪತ್ರಕರ್ತ, ಬಾಗಲಕೋಟೆಯ ರಾಮ ಮನಗೂಳಿ ಅವರು ಅನಾರೋಗ್ಯದಿಂದ ಶುಕ್ರವಾರ ಸಾವನ್ನಪ್ಪಿದ್ದಾರೆ.
ಆರೋಗ್ಯ ಸಮಸ್ಯೆಯಿಂದಾಗಿ ಅವರು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ, ಕೊನೆಯುಸಿರೆಳೆದಿದ್ದಾರೆ.
ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ಹಾಗೂ ನಾಡನುಡಿ ದಿನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದರು. ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರೈ ಆಗಿದ್ದರು. ಅವರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ರಾಮ ಮನಗೂಳಿ ಅವರು ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುವ ಜತೆಗೆ, ಕಾರ್ಯನಿರತ ಪತ್ರಕರ್ತರ ಸಂಘಟನೆಗೂ ಹೆಚ್ಚು ಒತ್ತು ನೀಡುತ್ತಿದ್ದರು. ಯಾವುದೇ ರಾಜಿ ಇಲ್ಲದೇ ಇದ್ದಿದ್ದನ್ನು ಇದ್ದಂಗೆ ಬರವಣಿಗೆ ಮೂಲಕ ಬೆಳಕು ಚೆಲ್ಲುತ್ತಿದ್ದರು ಎಂದು ಅವರೊಂದಿಗಿನ ಒಡನಾಟವನ್ನು ಅವರ ಆಪ್ತರು ಸ್ಮರಿಸಿದ್ದಾರೆ.