ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

Date:

ಬೈಕ್‌ಗೆ ಕೆಕೆಆರ್‌ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ.

- Advertisement -

ಜೇವರ್ಗಿ ಪಟ್ಟಣದ ಲಕ್ಷ್ಮೀ ಚೌಕ್ ನಿವಾಸಿ ಮೌನೇಶ್ ಭೀಮರಾಯ ವಿಶ್ವಕರ್ಮ (38) ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇನ್ನಿಬ್ಬರು ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಮೃತ ಮೌನೇಶ್ ಸೇರಿ ಮೂವರು ಬೈಕ್ ಮೇಲೆ ಜೇವರ್ಗಿ ಕಡೆಗೆ ಹೊರಟಿದ್ದರು. ಶಹಾಪುರ ಕಡೆಯಿಂದ ಹೊರಟಿದ್ದ ಬಸ್ ಡಿಕ್ಕಿ ಹೊಡೆದ ಹಿನ್ನಲೆ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ; ಬೈಕ್‌ ಸವಾರ ಸಾವು :

ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಸಮೀಪದ ನಂದಿಕೂರ ತಾಂಡಾ ಕ್ರಾಸ್ ಬಳಿಯ ಬ್ರಿಜ್ ಹತ್ತಿರ ನಡೆದಿದೆ.

ಸೀತನೂರ ಗ್ರಾಮದ ಸಾವನಕುಮಾರ (25) ಮೃತರು. ಬೈಕ್‌ ಹಿಂಬದಿ ಕುಳಿತ ಹುಸೇನ್ ಪಟೇಲ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನಕುಮಾರ ಮತ್ತು ಹುಸೇನ್ ಪಟೇಲ್ ಅವರು ಬೈಕ್ ಮೇಲೆ ಕಲಬುರಗಿ ಕಡೆಯಿಂದ ಸೀತನೂರ ಕಡೆಗೆ ಹೊರಟಿದ್ದರು. ನಂದಿಕೂರ ತಾಂಡಾ ಕ್ರಾಸ್ ಬ್ರಿಜ್ ಬಳಿ ಕಲಬುರಗಿ ಕಡೆಯಿಂದ ಜೇವರ್ಗಿ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಯಂತ್ರಣ ಬೋರ್ಡ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ತಗ್ಗಿನಲ್ಲಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಸಾವನಕುಮಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹುಸೇನ್ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಗಾಯಗೊಂಡ ಹುಸೇನ್ ಪಟೇಲ್ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೈಹಿಕ–ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಪೊಲೀಸ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸಲಹೆ

ಪೊಲೀಸರು ದೇಶದ ಒಳಗಿನ ಸೈನಿಕರಂತೆ ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಹಾಗೂ...

ಚಿಂತಾಮಣಿ | ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ದಾಳಿ:ಪಿಡಿಒ ದೂರು,ತನಿಖೆ ಚುರುಕು

ತಾಲೂಕಿನ ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನರಾಯನಹಳ್ಳಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ...

ಚಿಕ್ಕಬಳ್ಳಾಪುರ | ಗ್ರಾಮಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಲಿ: ಈಶ್ವರ ಖಂಡ್ರೆ

ಗ್ರಾಮಗಳು ದೇಶದ ಅಭಿವೃದ್ಧಿಯ ಅಡಿಪಾಯವಾಗಿದ್ದು, ಗ್ರಾಮೀಣ ಭಾಗದ ಸಮಗ್ರ ಪ್ರಗತಿಗೆ ಪ್ರತಿಯೊಬ್ಬರೂ...