ಬೀದರ್‌ | ಪ್ರತ್ಯೇಕ ಅಪಘಾತ : ಇಬ್ಬರ ಸಾವು

Date:

ಜಿಲ್ಲೆಯ ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ.

- Advertisement -

ಆಟೊಗೆ ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ವಿನೋದ ಗಾಯಕವಾಡ (35) ಮೃತ ಯುವಕ.

ವಿನೋದ ಪರ್ತಾಪುರ ಗ್ರಾಮದಿಂದ ಬಸವಕಲ್ಯಾಣ ನಗರಕ್ಕೆ ಆಟೊದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಬಸವಕಲ್ಯಾಣ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಯುವಕ ಸಾವು :

ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಬಾಜೋಳಗಾ (ಕೆ) ಗ್ರಾಮದ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.

ಭಾಲ್ಕಿ ತಾಲ್ಲೂಕಿನ ಮರೂರ್ ಗ್ರಾಮದ ಪ್ರಶಾಂತ್ (18) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ಪ್ರಶಾಂತ್ ಹಾಗೂ ಸಂಬಂಧಿಕ ಕನಿಲ್ ಇಬ್ಬರು ಬಸವಕಲ್ಯಾಣದಿಂದ ಭಾಲ್ಕಿ ಕಡೆಗೆ ಬೈಕ್ ಮೇಲೆ ಮಧ್ಯರಾತ್ರಿ ತೆರಳುತ್ತಿದ್ದರು. ಈ ವೇಳೆ ಬಾಜೋಳಗಾ (ಕೆ)- ದಾಡಗಿ ಸಮೀಪ ಟ್ರ್ಯಾಕ್ಟರ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರಶಾಂತ್ ಸ್ಥಳದಲ್ಲೇ ಸಾವನಪ್ಪಿದ್ದು, ಕನಿಲ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ವರ್ಷಾಚರಣೆ : ಶುಭ ಕೋರುವ APK ಫೈಲ್ ಕ್ಲಿಕ್ಕಿಸಬೇಡಿ : ಎಸ್ಪಿ ಪ್ರದೀಪ್ ಗುಂಟಿ

ಗಾಯಗೊಂಡ ಕನಿಲ್ ಗೆ ಭಾಲ್ಕಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...