ಕಲಬುರಗಿ ನಗರದ ಸೈಯದ್ ಚಿಂಚೋಳಿ ಕ್ರಾಸ್ ಹತ್ತಿರದ ಆಶ್ರಯ ಕಾಲೋನಿಯ ಯುವಕ ಮತ್ತು ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದ ವ್ಯಕ್ತಿಯೊಬ್ಬರನ್ನು ಮಂಗಳವಾರ ತಡರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಸೈಯದ್ ಚಿಂಚೋಳಿ ಕ್ರಾಸ್ ಹತ್ತಿರದ ರೋಹನ್ ದಶರಥ ವಾಕೋಡೆ (22) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆಯಾದ ರೋಹನ್ ಈ ಮೊದಲು ಜ್ಯೋತಿಷ್ಯ ಹೇಳುವ ಕೆಲಸ ಮಾಡುತ್ತಿದ್ದ. ಆ ಕೆಲಸ ಬಿಟ್ಟು ಇತ್ತೀಚೆಗಷ್ಟೇ ನಗರದ ಮೊಬೈಲ್ ಅಂಗಡಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕೆಲಸ ಮುಗಿಸಿಕೊಂಡು ರಾತ್ರಿ ಬೈಕ್ ಮೇಲೆ ಮನೆಗೆ ಬರುತ್ತಿದ್ದಾಗ ಕೊಲೆ ನಡೆದಿದೆ ಎನ್ನಲಾಗುತ್ತಿದೆ.
ಈ ಕುರಿತು ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಕಟ್ಟಿಗೆಯಿಂದ ಹೊಡೆದು ಕೊಲೆ:
ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಮಶಾಕ್ ಸಾಬ್ ಮಕ್ಕಸಾಬ್ (40) ಎಂಬಾತನ ಕೊಲೆಯಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಯಾದ ಮಶಾಕ್ ಸಾಬ್ ಅವರು ಕೃಷಿಕರಾಗಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ
ಎರಡು ಪ್ರತೇಕ ಪ್ರಕರಣಗಳಲ್ಲಿ ಹಳೆ ವೈಷಮ್ಯಕ್ಕೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.