ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ; ಹೊತ್ತಿ ಉರಿದ ಕಾರು

Date:

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಕಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ನಾಲ್ಕು ಕಾರುಗಳು ಜಖಂಗೊಂಡಿವೆ.

- Advertisement -

ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿ ನಾಲ್ಕು ಕಾರು ಜಖಂಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಬೆಂಗಳೂರು ಕಡೆಯಿಂದ ಮೈಸೂರು ಕಡೆ ತೆರಳುವಾಗ ಹೆದ್ದಾರಿಯಲ್ಲಿ ಅತೀವೇಗವಾಗಿ ಬಂದ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಹಿಂದಿನಿಂದ ವೋಕ್ಸ್‌ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ವಾಹನಗಳಿಗೆ ವ್ಯಾಗನ್‌ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರ ಚಲಿಸುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ.

ಬೆಂಕಿ ಅವಘಡ

ಬಳಿಕ ವೋಕ್ಸ್ ವ್ಯಾಗನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾರನ್ನು ಸಂಪೂರ್ಣ ಆವರಿಸಿಕ್ಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿದ್ದ ಬೆಂಗಳೂರಿನ‌ ನವ ದಂಪತಿ ಯಶವಂತ್-ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅವರನ್ನು ರಕ್ಷಣೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಹೆದ್ದಾರಿ | ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಇನ್ನು ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ದಸರಾ ಪೂರ್ವ ಸಿದ್ಧತೆ ಮತ್ತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ತೆರಳುತ್ತಿದ್ದರು. ಅವರ ಕಾರಿಗೂ ಡಿಕ್ಕಿ ಸಂಭವಿಸಿದೆ. ಈ ಘಟನೆಯಿಂದಾಗಿ ಎಸ್‌ಪಿ ಯತೀಶ್ ಅವರು ಕಾರು ಜಖಂಗೊಂಡಿದೆ. ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಬೇರೊಂದು ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ.

ಈ ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...