ಕೊಡಗು | ಕನ್ನಡ ಭಾಷೆಯ ಸ್ಥಿತಿಗತಿ ಕುರಿತು ಗಂಭೀರ ಚಿಂತನೆ ಅಗತ್ಯ: ಕೆ ಜಿ ಬೋಪಯ್ಯ

Date:

ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಬೆಳೆಸಿಕೊಳ್ಳಬೇಕೆಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ ಅವರು ಹೇಳಿದರು.

- Advertisement -

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನವಿದ್ದರೂ, ಪ್ರಸ್ತುತ ಅದರ ವಾಸ್ತವ ಪರಿಸ್ಥಿತಿ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಹಾಗೂ ಸ್ಥಳೀಯ ಭಾಷೆಗಳು ಇನ್ನೂ ಬಲವಾಗಿದ್ದರೂ, ನಗರ ಮತ್ತು ಮಹಾನಗರ ಪ್ರದೇಶಗಳಲ್ಲಿ ಕನ್ನಡದ ಸ್ಥಿತಿ ಕುರಿತು ಗಂಭೀರವಾಗಿ ಚಿಂತನೆ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

“ಕನ್ನಡ ಭಾಷೆಯ ಬಗ್ಗೆ ತಾತ್ಸಾರ ಮನೋಭಾವ ಇರಬಾರದು. ಸರ್ಕಾರಿ ಕನ್ನಡ ಶಾಲೆಗಳ ಇಂದಿನ ಸ್ಥಿತಿಗತಿ ಕುರಿತು ಸಮಾಜ ಚಿಂತಿಸಬೇಕಾಗಿದೆ ಎಂದು ಅವರು ಹೇಳಿದರು. ಕನ್ನಡ, ಕೊಡವ ಹಾಗೂ ಅರೆಭಾಷೆ ಸೇರಿದಂತೆ ಸ್ಥಳೀಯ ಭಾಷೆಗಳು ಉಳಿಯಬೇಕು. ಇತರೆ ಭಾಷೆಗಳನ್ನು ಗೌರವಿಸುವ ಮನೋಭಾವ ನಮ್ಮಲ್ಲಿದ್ದರೂ, ನೆರೆಯ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗೆ ನೀಡುವ ಆದ್ಯತೆ ನಮ್ಮಲ್ಲಿ ಜಾಗೃತಿ ಮೂಡಿಸಬೇಕು” ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, “ಕನ್ನಡ ಭಾಷೆ, ನಾಡು-ನುಡಿ ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದರು. ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಸ್ಮರಣ ಸಂಚಿಕೆ ಅನಾವರಣ, ಕವಿಗೋಷ್ಠಿ, ವಿಚಾರಗೋಷ್ಠಿ, ಕೃಷಿ ಹಾಗೂ ಸಾಹಿತ್ಯ ಕುರಿತ ಚರ್ಚೆಗಳು ನಡೆಯಲಿವೆ” ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, “ಕೊಡಗು ಜಿಲ್ಲೆಯಲ್ಲಿ ಕನ್ನಡದ ಜೊತೆಗೆ ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಬೆಳವಣಿಗೆಗೆ ಸ್ಥಳೀಯರ ಕೊಡುಗೆ ಅಪಾರವಾಗಿದೆ ಎಂದರು. ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ನಡಿಕೇರಿಯಂಡ ಚಿಣ್ಣಪ್ಪ ಸೇರಿದಂತೆ ಅನೇಕರು ಕನ್ನಡ ಮತ್ತು ಕೊಡವ ಭಾಷೆಗಳ ಅಭಿವೃದ್ಧಿಗೆ ಶ್ರಮಿಸಿದ್ದು, ಅವರ ಸೇವೆಯನ್ನು ಯುವಜನತೆಗೆ ಪರಿಚಯಿಸುವ ಕಾರ್ಯ ನಡೆಯಬೇಕು” ಎಂದು ಹೇಳಿದರು.

ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕನ್ನಡ ಭಾಷೆಗೆ ರಾಜ್ಯದಲ್ಲಿ ಮೊದಲ ಸ್ಥಾನವಿದ್ದು, ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ಜೊತೆಗೆ ಭಾಷೆಗೆ ಇನ್ನಷ್ಟು ಉತ್ತೇಜನ ನೀಡಬೇಕಾಗಿದೆ ಎಂದರು. ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪ ಮಾತನಾಡಿ, ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 19 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಅವರಲ್ಲಿ ಬಹುತೇಕರು ಪ್ರಥಮ ಭಾಷೆ ಕನ್ನಡದಲ್ಲೇ ಅನುತ್ತೀರ್ಣರಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ಬುಡಕಟ್ಟು ಸಮುದಾಯದವರಿಗೆ ಸೌಲಭ್ಯ ಶಿಬಿರ: ಜನ್ ಭಾಗೀದಾರಿ ಅಭಿಯಾನಕ್ಕೆ ಚಾಲನೆ

ಸಮ್ಮೇಳನದಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ವಾಸು ರೈ, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಡಿ. ವಿಜೇತ್, ರಾಜೇಶ್ ಪದ್ಮನಾಭ, ನೆರವಂಡ ಉಮೇಶ್, ಈರಮಂಡ ಹರಿಣಿ ವಿಜಯ್, ಎ. ಲೋಕೇಶ್ ಕುಮಾರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...