ಹಾಸನ | ಮಹಿಳಾ ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಅಪಾರ ಹಾನಿ

Date:

ಸಬ್‌ ಇನ್‌ಸ್ಪೆಕ್ಟರ್‌ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

ಕೊಣನೂರು ಪೊಲೀಸ್ ಠಾಣೆ ಪಿಎಸ್ಐ ಶೋಭಾ ಭರಮಕ್ಕನವರ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರು ವಾಸವಿದ್ದ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶೋಭಾ ರಜೆ ಮುಗಿಸಿ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೋಭಾ ಭರಮಕ್ಕನವರ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೊಲೀಸರು ಬಂಧಿಸಿ ಕರೆತರುವಾಗ ಸೇತುವೆಯಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಸಾವು

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28)...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ...