ಬೀದರ್‌ | ತೀವ್ರ ಹದಗೆಟ್ಟ ರಸ್ತೆ : ಕೇಳೋರಿಲ್ಲ ಇಸ್ಲಾಂಪುರ ಗ್ರಾಮಸ್ಥರ ಗೋಳು

Date:

ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಗಳಾಗಿ ಪರಿವರ್ತನೆ. ಈ ರಸ್ತೆ ಮೇಲೆ ಒಂದು ಸಲ ಸಂಚರಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯ ಸಂಚರಿಸುವ ಸಂಕಟ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ!

- Advertisement -

ಬೀದರ್‌ ತಾಲೂಕಿನ ಇಸ್ಲಾಂಪುರ ಗ್ರಾಮದಿಂದ ಕೌಠಾ(ಬಿ) ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿರುವುದು ಸಂಚಾರ ದುಸ್ತರವಾಗಿದೆ, ಕ್ಯಾರೇ ಎನ್ನದ ಅಧಿಕಾರಿಗಳ, ಗ್ರಾಮಸ್ಥರ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೀದರ-ಔರಾದ ರಾಷ್ಟ್ರೀಯ ಹೆದ್ದಾರಿಯ ಕೌಠಾ(ಬಿ) ಸೇತುವೆಯಿಂದ 2 ಕಿ.ಮೀ. ದೂರದ ಇಸ್ಲಾಂಪುರ ಗ್ರಾಮದಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, 1,200 ಮತದಾರರಿದ್ದಾರೆ. ಆದರೆ ಸಾರ್ವಜನಿಕರು ನಿತ್ಯ ಸಂಚರಿಸುವ ರಸ್ತೆ ಹದಗೆಟ್ಟು ದಶಕಗಳೇ ಉರಳಿದರೂ ಕನಿಷ್ಠ ದುರಸ್ತಿ ಕಾಣದೇ ಇರುವುದು ವಿಪರ್ಯಾಸವೇ ಸರಿ.

ಜಿಲ್ಲಾ, ತಾಲೂಕು ಕೇಂದ್ರವಾಗಿರುವ ಬೀದರ್‌ ಕೇಂದ್ರಕ್ಕೆ ತೆರಳುವ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಈ ರಸ್ತೆಯೇ ಆಧಾರ. ಇನ್ನು ಔರಾದ್‌ ತಾಲೂಕಿಗೆ ತೆರಳಲು, ರೈತರು ಹೊಲಗಳಿಗೆ ಹೋಗಲು ಇದೇ ರಸ್ತೆ ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡೂ ಬದಿಗೆ ಮುಳ್ಳು ಗಿಡಗಳು ಬೆಳೆದಿದ್ದು ಸವಾರಿಗೆ ಮುಳ್ಳು ಚುಚ್ಚುತ್ತವೆ, ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ನಿತ್ಯ ಸರ್ಕಸ್ ಮಾಡುತ್ತ ಈ ರಸ್ತೆಯಲ್ಲಿ ಪ್ರಯಾಣಿಸುವ ಗ್ರಾಮಸ್ಥರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

Advertisements

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳು ಜಾರಿಗೊಳಿಸಿವೆ. ಆದರೆ ʼದೇವರು ಕೊಟ್ಟರೂ ಪೂಜಾರಿ ಕೊಡಲ್ಲʼ ಎನ್ನುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ, ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಕಾರಣ ಜನರು ನಿತ್ಯ ಸಂಕಟ ಅನುಭವಿಸುವುದು ಇಂದಿಗೂ ಸಾಮನ್ಯವಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ವಾಗೀಣ ಅಭಿವೃದ್ಧಿ ರಾಜ್ಯ ಸರ್ಕಾರ ಪ್ರತಿ ವರ್ಷ ₹5 ಸಾವಿರ ಕೋಟಿ ಅನುದಾನ ಮೀಸಲಿಡುತ್ತದೆ. ಆದರೆ ಜನಪ್ರತಿನಿಧಿಗಳು ಅದನ್ನು ಸಮರ್ಪಕವಾಗಿ ಬಳಸಿದ್ದರೆ ಗ್ರಾಮೀಣ ಭಾಗದ ಬಹುತೇಕ ಅನೇಕ ಸಮಸ್ಯೆಗಳು ಮುಕ್ತಿ ಪಡೆಯಬಹುದು. ಆದರೆ ಆಡಳಿತ ವ್ಯವಸ್ಥೆಗೆ ಇಚ್ಚಾಶಕ್ತಿ ಇಲ್ಲದಿದ್ದರೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗುತ್ತದೆ ಎಂದು ಪ್ರಜ್ಞಾವಂತ ನಾಗರಿಕರ ಹೇಳುತ್ತಾರೆ.

ಹದಗೆಟ್ಟ ರಸ್ತೆಯಿಂದ ಬಸ್‌ ಬಂದ್‌ :

ʼಪ್ರತಿ ಸಲ ಚುನಾವಣೆ ವೇಳೆ ಭರವಸೆ ನೀಡುವ ಜನಪ್ರತಿನಿಧಿಗಳು ದಶಕ ಕಳೆದರೂ ಕನಿಷ್ಠ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಈ ಬಗ್ಗೆ ಕ್ಷೇತ್ರದ ಶಾಸಕ, ಸಚಿವ ರಹೀಂ ಖಾನ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ. ಅಧಿಕ ಮಳೆ ಬಂದರೆ ರಸ್ತೆ ಪಕ್ಕದ ಮಾಂಜ್ರಾ ನದಿ ನೀರು ಹರಿದು ರಸ್ತೆ ಮಧ್ಯೆದ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್‌ ಕೂಡ ಬರುತ್ತಿಲ್ಲ. ಹೀಗಾಗಿ ಮಹಿಳೆಯರು, ಗರ್ಭೀಣಿಯರು ನಡೆದು ಹೋಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕುʼ ಎಂದು ಗ್ರಾಮದ ನಿವಾಸಿ ರಾಜಕುಮಾರ್‌ ಬಿರಾದರ್ ಈದಿನ.ಕಾಮ್‌ ಜೊತೆಗೆ ಮಾತನಾಡಿ ಒತ್ತಾಯಿಸಿದರು.

ಈ ಹಿಂದೆ ಭೀಮಣ್ಣ ಖಂಡ್ರೆಯವರು ಶಾಸಕರಾಗಿದ್ದ ವೇಳೆ ಭಾಲ್ಕಿ ಮತಕ್ಷೇತ್ರಕ್ಕೆ ಒಳಪಟ್ಟಿತ್ತು, ಆವಾಗ ಒಂದೆರಡು ಸಲ ರಸ್ತೆ ದುರಸ್ತಿ ಕಂಡಿತು. ತದನಂತರ ಅರ್ಧ ರಸ್ತೆ ದುರಸ್ತಿಗೊಳಿಸಿ ಕೈತೊಳಿದುಕೊಂಡಿದ್ದಾರೆ. ಇದೀಗ ಸಂಪೂರ್ಣ ಹದಗೆಟ್ಟು ಹೋಗಿದ್ದು, ಪಾದಚಾರಿಗಳು ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ಈ ರಸೆ ಮೇಲೆ ರಾತ್ರಿ ವೇಳೆ ಯಾರೋಬ್ಬರೂ ಓಡಾಡಲು ಆಗದಂತೆ ರಸ್ತೆ ಉದ್ದಕ್ಕೂ ಮುಳ್ಳಿನ ಗಿಡ ಬೆಳೆದು ನಿಂತಿವೆʼ ಎಂದು ಕಿಡಿಕಾರಿದರು.

ʼಊರಿನ ಒಂದು ದಿಕ್ಕಿಗೆ ಮಾಂಜ್ರಾ ನದಿ, ಇನ್ನೊಂದು ದಿಕ್ಕಿಗೆ ಹಳ್ಳ ಹರಿಯುವ ಕಾರಣ ʼಇಸ್ಲಾಂಪೂರ ಅಂದ್ರೆ ಇಸ್ಲಾಡಕೊತಾ ಹೋಗೋದುʼ ಎಂದು ಮಾಜಿ ಸಚಿವ ಭೀಮಣ್ಣಾ ಖಂಡ್ರೆಯವರು ಹಾಸ್ಯ ಚಟಾಕಿ ಮಾಡುತ್ತಿದ್ದರು. ಇಂದಿಗೂ ಅದೇ ದುಸ್ಥಿತಿಯಲ್ಲಿ ನಮ್ಮೂರಿನ ಜನ ಜೀವನ ನಡೆಸುತ್ತಿದ್ದೇವೆʼ ಎಂದು ಇಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

ಈ ಕುರಿತು ಮಾಹಿತಿಗಾಗಿ ಕ್ಷೇತ್ರದ ಶಾಸಕ, ಪೌರಾಡಳಿತ ಸಚಿವ ರಹೀಂ ಖಾನ್‌ ಅವರಿಗೆ ಈದಿನ.ಕಾಮ್‌ ಹಲವು ಬಾರಿ ಸಂಪರ್ಕಿಸಿದರೂ ಕರೆ ಸ್ವೀಕರಿಸಲಿಲ್ಲ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...