ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಭತ್ತಲಹಳ್ಳಿ ಗ್ರಾಮದ ನಿವಾಸಿ ರಾಜು(37) ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ. ರಾಜು 2020ರ ಜೂನ್‌ನಲ್ಲಿ ತನ್ನ ಸ್ನೇಹಿತನ ಮಗಳನ್ನು ಅಪಹರಿಸಿ ಚಿಂತಾಮಣಿ ತಾಲೂಕಿನ ಹಳ್ಳಿಯೊಂದರ ಶೆಡ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ರಾಗಿ, ಜೋಳ ಖರೀದಿ ಕೇಂದ್ರ; ನೋಂದಣಿಗೆ ಡಿ.ಸಿ ಮನವಿ
ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಸಿಪಿಐ ಕೆ.ಶ್ರೀನಿವಾಸಪ್ಪ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?
ವಿಚಾರಣೆ ಅವಧಿಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದ ರಾಜು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. 2024ರಲ್ಲಿ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ರಾಜುನನ್ನು ಹಿಡಿದು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.