ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ.
ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಇದನ್ನು ಓದಿದ್ದೀರಾ? ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್
ಸಂತ್ರಸ್ತ ಯುವಕ ಡಿಜಿ ಕಛೇರಿಯಲ್ಲಿ ಶುಕ್ರವಾರ ದೂರು ನೀಡಿದ್ದು, ಎಸ್‌ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಶನಿವಾರ ಸಂತ್ರಸ್ತ ಯುವಕನನ್ನು ಕರೆಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಸೂರಜ್ ರೇವಣ್ಣ ಬಂಧನ ಮಾಡಲಾಗಿದೆ.
ಈಗಾಗಲೇ ಸೂರಜ್ ರೇವಣ್ಣನ ಸಹೋದರ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನದಲ್ಲಿದ್ದಾರೆ.