ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ, ಬಲಪಂಥೀಯ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

Date:

Advertisements

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಬಲಪಂಥೀಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ.

47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ

2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವಿಡಿಯೋ ಕೂಡ ತೆಗೆದುಕೊಂಡು ಬ್ಲ್ಯಾಕ್ ಮೇಲ್‌ ಮಾಡಿದ್ದಾರೆಂದು ಆರೋಪಿಸಿದ್ದಾರೆ.

Advertisements

ಮಹಿಳೆಯು ನೀಡಿದ ದೂರಿನ ಮೇರೆಗೆ ಹಳೆಯ ಐಪಿಸಿ ಸೆಕ್ಷನ್‌ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈನಲ್ಲಿ ದೇಶದಲ್ಲಿ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದೆ.‌ ಈ ಘಟನೆಯು ನೂತನ ಕಾನೂನು ಜಾರಿಗೆ ಬರುವುದಕ್ಕೂ ಮೊದಲೇ ನಡೆದಿರುವುದಾಗಿ ತಿಳಿಸಿರುವುದರಿಂದ ಹಳೆಯ ಐಪಿಸಿ ಸೆಕ್ಷನ‌್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಅರುಣ್ ಕುಮಾರ್ ಪುತ್ತಿಲರವರು ಮಹಿಳೆಯೊಂದಿಗೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ‌ಅದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.

ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?

ಅರುಣ್‌ ಪುತ್ತಿಲ ಅವರು,2023ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಗೆ ಠಕ್ಕರ್‌ ಕೊಟ್ಟು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅಭಿಮಾನಿಯಾಗಿದ್ದರು.

ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ್ದಾರೆ. ಬಳಿಕ ದೂರುದಾರರ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.

2024ರ ಲೋಕಸಭಾ ಚುನಾವಣೆಯ ಬಳಿಕ ನನ್ನೊಂದಿಗೆ ಮಾತುಕತೆ ಕಡಿಮೆಗೊಳಿಸಿದ್ದರು. ನನ್ನನ್ನು ಸಂಪೂರ್ಣವಾಗಿ ಶೋಷಣೆಗೆ ಒಳಪಡಿಸಿ ಅವರ ಆಸೆ ತೀರಿಸಿಕೊಂಡು ನನ್ನನ್ನು ದೂರ ಮಾಡಿದರು. ಆ ಭಯದಿಂದ ನನ್ನ ನಿವಾಸವನ್ನು ಪುತ್ತೂರಿಗೆ ಸ್ಥಳಾಂತರಿಸಿ ಬಾಡಿಗೆ ಮನೆಯಲ್ಲಿ ನನ್ನ ಮಗಳೊಂದಿಗೆ ಉದ್ಯೋಗ ಹಾಗೂ ವರಮಾನವಿಲ್ಲದೇ ಕಷ್ಟಪಡುತ್ತಿದ್ದೇನೆ. ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲರು ಮಾಡಿದ ದ್ರೋಹ, ಅನ್ಯಾಯ, ಅಕ್ರಮ ವಿಶ್ವಾಸದ್ರೋಹಕ್ಕೆ ಕಾನೂನು ಕ್ರಮ ಕೈಗೊಂಡು ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ದೂರಿನಲ್ಲಿ ಸಂತ್ರಸ್ತ‌ ಮಹಿಳೆ ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X