ಬಾಗಲಕೋಟೆ | ಬ್ರಿಜ್ ಭೂಷಣ್ ಸಿಂಗ್‌ ಬಂಧಿಸಿ, ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ದಸಂಸ ಆಗ್ರಹ

Date:

  • ಧಾರ್ಮಿಕ ಆಚರಣೆಯಂತೆ ಸಂಸತ್‌ ಭವನ ಉದ್ಘಾಟನೆ ಪ್ರಜಾಪ್ರಭುತ್ವ ವಿರೋಧಿ
  • ಬಿಜೆಪಿಯಂತಹ ಪ್ರಜಾಪ್ರಭುತ್ವ, ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ

ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣಸಿಂಗ್ ಬಂಧಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ದಸಂಸ ಬಾಗಲಕೋಟೆ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಗತಿಸಿದ್ದು, ಈ ಅವಧಿಯಲ್ಲಿ ಸಾಕಷ್ಟು ಸರ್ಕಾರಗಳನ್ನು ಭಾರತದ ಜನ ಕಂಡಿದ್ದಾರೆ. ಆದರೆ, ಇಂತಹ ಪ್ರಸ್ತುತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಂತಹ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಹಾಗೂ ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ ಎಂದು ಕಿಡಿಕಾರಿದರು.

ನೂತನ ಸಂಸತ್‌ ಭವನ ಉದ್ಘಾಟನೆಯನ್ನು ಧಾರ್ಮಿಕ ಆಚರಣೆಯಂತೆ, ರಾಜನ ಪಟ್ಟಾಭಿಷೇಕದಂತೆ ಆಚರಣೆ ಮಾಡುವುದರ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ನಡೆ ಅನುಸರಿಸಿದ್ದು ಖಂಡನೀಯ. ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಘನವೆತ್ತ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು ವಿರೋಧ ಪಕ್ಷದ ನಾಯಕರು, ನಾನಾ ಕ್ಷೇತ್ರದ ಸಾಧಕರು ಇರಬೇಕಾಗಿತ್ತು. ಅಲ್ಲದೆ ರಾಜದೊರೆಗಳು ಸರ್ವಾಧಿಕಾರಿ ಸಂಕೇತವಾಗಿ ಸ್ಥಾಪಿಸುವಂತಹ ಸೆಂಗೋಲ್‌ ಸ್ಥಾಪಿಸುವ ಮೂಲಕ ಸರ್ವಾಧಿಕಾರಿ ಹಾಗೂ ಮಹಿಳಾ ವಿರೋಧಿ ಧೋರಣೆ ತಾಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಸಂಸ ತಾಲೂಕು ಸಂಚಾಲಕ ಸದಾಶಿವ ಐನಾಪುರ ಮಾತನಾಡಿ, “ದೆಹಲಿಯ ಜಂತರ್‌ ಮಂತರ್‌ ಪ್ರದೇಶದಲ್ಲಿ ಸುಮಾರು 50 ದಿನಗಳಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳ ಹೋರಾಟವನ್ನು ಪೋಲೀಸರ ಧಮನಗೊಳಿಸಲು ಪ್ರಯತ್ನಿಸುತ್ತಿರುವುದು ಹಾಗೂ ಆರೋಪಿಯಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್‌ ರಕ್ಷಿಸುತ್ತಿರುವುದು ನೋಡಿದರೆ ಇವರ ಮಹಿಳಾ ವಿರೋಧಿ ನೀತಿ ಸ್ಪಷ್ಟವಾಗಿ ಅರ್ಥವಾಗುತ್ತದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಶಾಲಾ ಪಠ್ಯ ಪರಿಷ್ಕರಣೆ | ಬರಗೂರು ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ ಸರ್ಕಾರ

ದೇಶದ ಸಂವಿಧಾನಿಕ ಮುಖ್ಯಸ್ಥರಾದ ರಾಷ್ಟ್ರಪತಿಗಳು ಈ ಘಟನೆಯಲ್ಲಿ ಮಧ್ಯ ಪ್ರವೇಶಿಸಿ ಆರೋಪಿಯನ್ನು ತಕ್ಷಣ ಬಂಧಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಸದಾಶಿವ ಐನಾಪುರ ಆಗ್ರಹಿಸಿದರು.

ಈ ವೇಳೆ ರಬಕವಿ-ಬನಹಟ್ಟ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ, ಅಪ್ಪಶಿ ಕಾಂಬಳೆ, ರಾಜು ಪೋಳ, ಪ್ರವೀಣಕೂಮಾರ ನಿಡೋಣಿ ಹಾಗೂ ಇತರೆ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ....

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ...

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...