ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

Date:

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಜಾರ್ಖಂಡ್ ಮೂಲದ ವ್ಯಕ್ತಿ ಹಾಗೂ ಹೋಂಸ್ಟೇ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಪೊಲೀಸರ ಮಾಹಿತಿ ಪ್ರಕಾರ, ಅಮೆರಿಕ ಮೂಲದ ಮಹಿಳೆ ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಹೋಂಸ್ಟೇನಲ್ಲಿ ತಂಗಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಸಿಹಿ ಪಾನೀಯದಲ್ಲಿ ಮದ್ದು ಬೆರೆಸಿ ನೀಡಿ, ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಸಂತ್ರಸ್ತೆ ಯಾರನ್ನೂ ಸಂಪರ್ಕಿಸದಂತೆ ಮಾಡಲು ಹೋಂಸ್ಟೇ ಮಾಲೀಕ ವಿಶಾಲ್ ವೈಫೈ ಸಂಪರ್ಕವನ್ನು ಮೂರು ದಿನಗಳ ಕಾಲ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಮೂರು ದಿನಗಳ ಬಳಿಕ ಮೈಸೂರಿಗೆ ತೆರಳುವುದಾಗಿ ಹೇಳಿ ಹೋಂಸ್ಟೇಯಿಂದ ಹೊರಟ ಸಂತ್ರಸ್ತೆ, ಅಲ್ಲಿಂದ ಅಮೆರಿಕದ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾರೆ. ಅಮೆರಿಕ ಅಧಿಕಾರಿಗಳು ಮೈಸೂರಿನ ಪೊಲೀಸ್ ಅಧಿಕಾರಿಗಳನ್ನು ಇಮೇಲ್ ಮೂಲಕ ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯಂತೆ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೃಜೇಶ್ ಕುಮಾರ್ ಹಾಗೂ ಹೋಂಸ್ಟೇ ಮಾಲೀಕ ವಿಶಾಲ್ ಅವರನ್ನು ಬಂಧಿಸಲಾಗಿದ್ದು, ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಪ್ರತಿಕ್ರಿಯೆ ನೀಡಿದ್ದು, ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಯುವಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು: ಡಾ. ಹೆಚ್.ವಿ. ವಾಸು

ಇದೇ ವೇಳೆ, ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...