ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

Date:

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

- Advertisement -

ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಹಾಗೆಯೇ ಆರೋಪಿ ಬಿಜೆಪಿ ಮುಖಂಡ ಪ್ರಭಾವಿಯಾಗಿರುವ ಕಾರಣ ವಿಟ್ಲ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲು ತಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಮಹಿಳೆಯರ ಉಡುಗೆ ಬಗ್ಗೆ ಬಿಜೆಪಿ ಮುಖಂಡನ ಅವಹೇಳನ; ಬಿಜೆಪಿಯ ಮಹಿಳಾ ವಿರೋಧಿ ಸಿದ್ಧಾಂತದ ಪ್ರತಿಬಿಂಬ

ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕನೂ ಆಗಿದ್ದು, ಜಿಲ್ಲೆಯಲ್ಲಿ ಪ್ರಭಾವಿಯಾಗಿದ್ದಾನೆ. ತನ್ನ ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ ಎಂಬ ಮಾಹಿತಿಯಿದೆ.

ಬಾಲಕಿ ತನ್ನ ಮೇಲಾದ ಲೈಂಗಿಕ ದೌರ್ಜನ್ಯದಿಂದಾಗಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಶಾಲೆಗೆ ಬರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದಾರೆ. ಆದರೆ ಅವರನ್ನೂ ಒಳಗೆ ಹೋಗಲು ಬಿಟ್ಟಿಲ್ಲ ಎಂದು ಹೇಳಲಾಗಿದೆ.

ಬಾಲಕಿ ಪೋಷಕರು ಆರೋಪಿಗೆ ಸೇರಿದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಜನವರಿಯಲ್ಲಿ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ. ಇದೀಗ ತಡವಾಗಿ ಪ್ರಕರಣ ದಾಖಲಿಸಿದ್ದು, “ನೀನು ನನ್ನೊಂದಿಗೆ ಗುಡ್ಡಕ್ಕೆ ಬರ್ತೀಯಾ” ಎಂದು ಆರೋಪಿ ಸಂತ್ರಸ್ತೆಯನ್ನು ಕೇಳಿರುವುದಾಗಿ ಮಾತ್ರ ಉಲ್ಲೇಖಿಸಿದ್ದಾರೆ.

ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆಯಿದೆ ಎಂಬುದು ಸ್ಥಳೀಯರ ಆತಂಕ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...