ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಕುವೆಂಪುನಗರ ಐದನೇ ಕ್ರಾಸ್ ನಿವಾಸಿ ದರ್ಶನ್ ಬಂಧಿತ ಆರೋಪಿ.
ಸೆಪ್ಟೆಂಬರ್ 30ರಂದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿತ್ತು. ಈ ಮೆರವಣಿಗೆಯಲ್ಲಿ ಆರೋಪಿ ದರ್ಶನ್ ಭಾಗವಹಿಸಿದ್ದ. ಈ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಜತೆ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ತುಮಕೂರು ನಗರದ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಎದೆಯ ಭಾಗಕ್ಕೆ ಕೈಹಾಕಿ ಎಳೆದಿರುವ ಬಗ್ಗೆ, ಮಹಿಳಾ ಪಿಎಸ್‌ಐ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರೋಪಿ ದರ್ಶನ್ ನನ್ನು ಪೊಲೀಸರು ಬಂಧಿಸಿದ್ದಾರೆ.