ಬೀದರ್‌ | ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಡೆಗೆ ಎಸ್‌ಎಫ್‌ಐ ಆಗ್ರಹ

Date:

2024 25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್ ಶುಲ್ಕವನ್ನು ಹೆಚ್ಚಿಸಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತೀವ್ರವಾಗಿ ಖಂಡಿಸಿದೆ.

- Advertisement -

ಈ ಕುರಿತು ಎಸ್‌ಎಫ್‌ಐ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಅರುಣ ಕೋಡಗೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಜಿಲ್ಲೆಯಲ್ಲಿ ಬಹುತೇಕ ಎಲ್ಲ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲ ತರಗತಿಯ ಪ್ರವೇಶಾತಿಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಮನಬಂದಂತೆ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾಗಿದ್ದರೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರ ಇನ್ನು ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ತುದಿಗಾಲಲ್ಲಿ ನಿಂತು ಪ್ರವೇಶಾತಿ ಶುಲ್ಕ ಹಾಗೂ ಬಟ್ಟೆ, ಶೂ, ಸಾಕ್ಸ್, ನೋಟ್ ಬುಕ್ಸ್‌ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನುಬಾಹಿರ. ಇಂತಹ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನಾ ಶುಲ್ಕ ಮಾತ್ರ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಆನ್‌ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ” ಎಂದು ಒತ್ತಾಯಿಸಿದರು.

ಡೊನೇಶನ್ ಹಾವಳಿ ನಿಯಂತ್ರಣ ಮಾಡಬೇಕು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗುಲೇಟಿಂಗ್ ಪ್ರಾಧಿಕಾರ ರಚಿಸಿ, ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯತೆ ರದ್ದುಪಡಿಸಬೇಕು,.ಅನಧಿಕೃತ ಶಾಲೆಗಳ ಮಾನ್ಯತೆ ಇಲ್ಲದೆ ಐಸಿಐಸಿ/ ಸಿಬಿಎಸ್ಸಿ ನಡೆಸುವ ಶಾಲೆಗಳ ಮಾನ್ಯತೆ ರದ್ದುಗೊಳಿಸಬೇಕು. ಅಧಿಕೃತ ಶಾಲೆಗಳ ಕನ್ನಡ ಮಾಧ್ಯಮ/ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಪ್ರಮುಖರಾದ ಅಮರ ಗಾದಗಿ, ರೋಷನ್ ಮಲ್ಕಾಪೂರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...