ಹಾಸನ ವಿಶ್ವವಿದ್ಯಾಲಯದ ಉಳಿವಿಗೆ ಎಸ್‌ಎಫ್‌ಐ, ಡಿವೈಎಫ್‌ಐ ಹೋರಾಟ

Date:

ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಎಸ್‌ಎಫ್‌ಐ, ಡಿವೈಎಫ್‌ಐ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಬುಧವಾರವೂ ಹೇಮಗಂಗೋತ್ರಿ ಕಾಲೇಜು ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕರವೇ ಮತ್ತು ರೈತ ಸಂಘಟನೆ ನಾಯಕರು ಹಾಗೂ ಹಿರಿಯ ಪತ್ರಕರ್ತ ಆರ್ ಪಿ ವೆಂಕಟೇಶ್ ಮೂರ್ತಿಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

- Advertisement -

“ಉಪಮುಖ್ಯಮಂತ್ರಿಗಳ ನೇತೃತ್ವದ ಸಂಪುಟ ಉಪಸಮಿತಿಯ ಕಳೆದ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲ್ಪಟ್ಟಿದ್ದ ಎಂಟು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ತೀರ್ಮಾನಿಸಿದೆ ಎಂಬ ವರದಿಯಾಗಿದ್ದು, ಈ ಪಟ್ಟಿಯಲ್ಲಿ ಹಾಸನ ವಿಶ್ವವಿದ್ಯಾಲಯವೂ ಸೇರಿದೆ. ಈಗಷ್ಟೇ ಶುರುವಾಗಿರುವ ವಿಶ್ವವಿದ್ಯಾಲಯವನ್ನು ಮುಚ್ಚಬೇಕಾಗಿರುವುದು ಈ ಜಿಲ್ಲೆಯ ಜನರಿಗೆ ನಿರಾಸೆಯಾಗಿದೆ. ಇದರಿಂದ ಇಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಂಬುದು ದುಬಾರಿಯಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
ಆರ್‌ಪಿವಿ

“ಪ್ರಸ್ತುತ ನಮ್ಮ ಜಿಲ್ಲೆಯ ಹಾಸನ ವಿಶ್ವವಿದ್ಯಾಲಯದ ವ್ಯಾಪ್ತಿಗೆ 57 ಕಾಲೇಜುಗಳು ಸೇರಿದ್ದು, ಒಟ್ಟು 23 ಸಾವಿರ ಮಂದಿ ವಿದ್ಯಾರ್ಥಿಗಳು(ಸ್ನಾತಕ ಮತ್ತು ಸ್ನಾತಕೋತ್ತರ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ. ಹಾಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚದೆ ಮುಂದುವರಿಸಬೇಕು. ಜತೆಗೆ ಹಾಸನ ವಿಶ್ವವಿದ್ಯಾನಿಲಯದ ನಿರ್ವಹಣೆಗೆ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸುವುದು ನಿಯಮ ಉಲ್ಲಂಘನೆ: ಎಸ್‌ ಎ ಗಫಾರ್

“ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತರ ಪದವಿ ಶಿಕ್ಷಣ ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಹಾಸನ ವಿಶ್ವವಿದ್ಯಾಲಯವನ್ನು ಇಲ್ಲೇ ಉಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...