ಯಾದಗಿರಿ | ವಿದ್ಯಾರ್ಥಿ ವೇತನ, ಫೆಲೋಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಎಸ್‌ಎಫ್‌ಐ ಪ್ರತಿಭಟನೆ

Date:

ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆ ಯಲ್ಲಿನ ನಿರ್ಲಕ್ಷದ ವಿರುದ್ಧ ಎಸ್.ಎಫ್.ಐ ಸುರಪುರ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಬಳಿಕ ಸುರಪುರ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ರಾಜ್ಯಾದ್ಯಂತ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಅಪಾರ ತೊಂದರೆಯನ್ನು ಉಂಟು ಮಾಡಿರುವ ಸರ್ಕಾರ, ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ. ಇದು ಖಂಡನೀಯ. ಸರ್ಕಾರ ಕಡಿತ ಮಾಡಿರುವ ವಿದ್ಯಾರ್ಥಿವೇತನ ಹಾಗೂ ಫೆಲೋಶಿಪ್ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ವಿದ್ಯಾರ್ಥಿಗಳ ಬಗ್ಗೆ ಕಿಂಚಿತ್ತು ಗಮನಹರಿಸುತ್ತಿಲ್ಲ ಎಂದು ಎಸ್‌ಎಫ್‌ಐ ಮುಖಂಡರು ಆರೋಪಿಸಿದರು.

60 ರಿಂದ 74.99 ಫಲಿತಾಂಶ ಪಡೆದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ರದ್ದು ಮಾಡಿದ ಪ್ರೋತ್ಸಾಹ ಧನವನ್ನು ಮುಂದುವರಿಸಬೇಕು, ಪ್ರತಿ ತಿಂಗಳು ಅಲ್ಪಸಂಖ್ಯಾತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ರೂಪಾಯಿ 25,000 ಗಳು ಪ್ರೋತ್ಸಾಹ ಧನವನ್ನು ಮುಂದುವರಿಸಬೇಕು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲು ಇರುವ ತಾರತಮ್ಯ ನೀತಿಯ ಆದೇಶವನ್ನು ವಾಪಸ್ ಪಡೆಯಬೇಕು, ರಾಜ್ಯದಲ್ಲಿ ಅಹಿಂದ ವರ್ಗಗಳ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು, ಸುರಪುರ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರ ನೇಮಕ ಮಾಡಬೇಕು, ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು, ಪ್ರತಿ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲಾ ಮಕ್ಕಳಿಗೆ ಅನುಕೂಲಕ್ಕೆ ತಕ್ಕಂತೆ ಬಸ್ ಓಡಿಸಬೇಕು ಎಂದು ಎಸ್ ಎಫ್ ಐ ಯಾದಗಿರಿ ಜಿಲ್ಲಾ ಸಂಚಾಲಕ ಇಮಾಮಸಾಬ ನದಾಫ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸುರಪುರ ತಾಲೂಕಿನ ಸಂಚಾಲಕ ಶರಣಬಸವ ದೊಡ್ಮಮನಿ, ವಿದ್ಯಾರ್ಥಿಗಳಾದ,
ಮಲ್ಲಿಕಾರ್ಜುನ ದೊಡ್ಮನಿ, ಮಹೇಶ್, ಸೋಪಣ್ಣ, ಭೀಮಾಶಂಕರ್, ಭೀಮರಾಯ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...