ನಾಕರಿಕ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಕರ್ನಾಟಕ ಸರ್ಕಾರವು ‘ಕರ್ನಾಟಕ ಒನ್’ಅನ್ನು ಆರಂಭಿಸಿದೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಸೇವೆಗಳನ್ನು ಒದಗಿಸಲು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಯಾದಗಿರಿ ಜಿಲ್ಲೆಯ ಶಹಾಪುರದ ಬಸವೇಶ್ವರ ವೃತ್ತದಲ್ಲಿರುವ ‘ಕರ್ನಾಟಕ ಒನ್’ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭವಾದ ಕಾರಣ, ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ಮಾಡಿಸಿಕೊಳ್ಳುತ್ತಿದ್ದಾರೆ. ಅಂತೆಯೇ, ಶಹಾಪುರ ತಾಲೂಕಿನ ವಿದ್ಯಾರ್ಥಿಗಳು ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಿದ್ದಾಗ, ಸರ್ಕಾರಿ ಶುಲ್ಕಕ್ಕಿಂತ ಹೆಚ್ಚುವರಿಯಾಗಿ 50 ರೂ.ಗಳನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಬಸ್ ಪಾಸ್‌ಗೆ ನಿಗಧಿತ ದರವನ್ನಷ್ಟೇ ತೆಗೆದುಕೊಳ್ಳಬೇಕು. ಹೆಚ್ಚಿನ ಹಣ ತೆಗೆದುಕೊಳ್ಳಬಾರದೆಂದು ಪ್ರಶ್ನಿಸಿದವರಿಗೆ ಅಲ್ಲಿನ ಸಿಬ್ಬದಿ ಪ್ರಕಾಶ್ ಎಂಬಾತ ಏಕವಚನದಲ್ಲೇ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
50 ರೂಪಾಯಿ ಹೆಚ್ಚಿಗೆ ಹಣ ಯಾಕೆ ತೆಗೆದುಕೊಳ್ಳುತ್ತಿದ್ದೀರಿ ಎಂದು ಪ್ರಶ್ನಿಸಿದವರಿಗೆ, ‘ನೀವು ಯಾರು ಕೇಳುವುದಕ್ಕೆ, ಇದು ನನ್ನ ಕೇಂದ್ರ, ನಾನು ಏನಾದ್ರು ಮಾಡುತ್ತೇನೆ’ ಎಂದು ಪ್ರಕಾಶ್ ದಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.