‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

Date:

  • ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ
  • ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದು

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ” ಎಂದರು.

“ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ ಪಡೆಯಬಹುದು. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಅಲ್ಲಿಯವರೆಗೂ ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

“ಈ ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಬಿಜೆಪಿ ಶಕ್ತಿಹೀನವಾಗಿದೆ. ಏಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ” ಎಂದರು.

“ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. 194,50,13,686 ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ವಿತರಿಸಲಾಗಿದೆ” ಎಂದು ವಿವರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...