ಸಮಾಜವನ್ನು ʼಹಿಂದುತ್ವʼ ಇಬ್ಭಾಗಿಸಿತ್ತು, ‘ಶಕ್ತಿ’ ಯೋಜನೆ ದೇವಸ್ಥಾನಗಳಿಗೆ ಜನರನ್ನು ಹತ್ತಿರವಾಗಿಸಿದೆ: ಪ್ರಿಯಾಂಕ್‌ ಖರ್ಗೆ

Date:

ದ್ವೇಷಕ್ಕಾಗಿ ಜನರನ್ನು ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ ಪ್ರೀತಿ ಮತ್ತು ಕಾಂಗ್ರೆಸ್‌ನ ‘ಶಕ್ತಿ’ ಯೋಜನೆ ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ಶಕ್ತಿ ಯೋಜನೆ ಯಶಸ್ಸಿನ ಕುರಿತು ಟ್ವೀಟ್‌ ಮಾಡಿರುವ ಅವರು, “ಹಿಂದುತ್ವ ಜನರನ್ನು ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಭಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆ ಸಬಲಗೊಳಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯದ ಎಲ್ಲ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ಇದರಿಂದ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...