ಶಕ್ತಿ ಯೋಜನೆ | ಬೇಕಾಬಿಟ್ಟಿಯಾಗಿ ಉಚಿತ ಟಿಕೆಟ್ ಹರಿದು ಬೀಸಾಕಿದ ಬಿಎಂಟಿಸಿ ನಿರ್ವಾಹಕ

Date:

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರೆಂಟಿಗಳ ಪೈಕಿ ಮೊದಲಿಗೆ ‘ಶಕ್ತಿ ಯೋಜನೆ’ಯನ್ನು ಜೂನ್ 11ರಂದು ಜಾರಿಗೆ ತಂದಿದೆ. ಈ ಯೋಜನೆಯ ಉದ್ದೇಶ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವುದಾಗಿದೆ. ಆದರೆ, ಇದನ್ನೇ ದುರ್ಬಳಕೆ ಮಾಡಿಕೊಂಡ ಕೆಲವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ನಿರ್ವಾಹಕರು ಇನ್ಸೆಂಟಿವ್ ಆಸೆಗೋಸ್ಕರ ಬೇಕಾಬಿಟ್ಟಿಯಾಗಿ ಟಿಕೆಟ್ ಹರಿದು ಬೀಸಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ. ಪ್ರತಿನಿತ್ಯ ಅಂದಾಜು 60 ಸಾವಿರಕ್ಕೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಮಹಿಳಾ ಪ್ರಯಾಣಿಕರ ಸಾರಿಗೆ ವೆಚ್ಚವನ್ನು ಸರ್ಕಾರ ನಿಗಮಗಳಿಗೆ ನೀಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ, ಈ ಯೋಜನೆಯ ದುರುಪಯೋಗ ಪಡೆದುಕೊಂಡ ಕೆಲವು ಬಸ್‌ ನಿರ್ವಾಹಕರು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮೆಜೆಸ್ಟಿಕ್​ನಿಂದ–ತಾವರಕೆರೆಗೆ ಹೋಗುವ (242-ಬಿ) ಬಿಬಿಎಂಟಿಸಿ ಬಸ್​​ನ ನಿರ್ವಾಹಕರೊಬ್ಬರು ಅ. 15ರಂದು ಬೇಕಾಬಿಟ್ಟಿಯಾಗಿ ಹೆಚ್ಚಿನ ಇನ್ಸೆಂಟಿವ್ ಆಸೆಗೆ ಬಿದ್ದು, ಮಹಿಳೆಯರಿಗೆ ಮಾತ್ರ ಮೀಸಲಾಗಿರುವ ಟಿಕೆಟ್‌ಗಳನ್ನು ಹರಿದು ಬಿಸಾಕಿದ್ದಾರೆ.

ನಿರ್ವಾಹಕರ ಈ ವರ್ತನೆ ಕಂಡು ಮಹಿಳಾ ಪ್ರಯಾಣಿಕರೊಬ್ಬರು ಯಾಕೆ ಈ ರೀತಿ ಟಿಕೆಟ್ ಹರಿದು ಬೀಸಾಕುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

ಸುಖಾಸುಮ್ಮನೇ ಮಹಿಳೆಯರಿಗೆ ಮೀಸಲಾಗಿರುವ ಉಚಿತ ಟಿಕೆಟ್‌ಗಳನ್ನು ಹರಿದು, ನಿಗಮಗಳಿಗೆ ನಿರ್ವಾಹಕರು ಹೆಚ್ಚಿನ ಲೆಕ್ಕ ತೋರಿಸುತ್ತಾರೆ. ಇದರಿಂದ ಹೆಚ್ಚಿನ ಫ್ರೀ ಟಿಕೆಟ್ ತೋರಿಸಿದರೇ ಹೆಚ್ಚು ಇನ್ಸೆಂಟಿವ್ ಬರಬಹುದು ಎಂಬ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ. ಇಂತಹ ನಿರ್ವಾಹಕರಿಂದಲೇ ಶಕ್ತಿ ಯೋಜನೆಗೆ ಕೆಟ್ಟ ಹೆಸರು” ಎಂದು ಪ್ರಯಾಣಿಕರು ಅಭಿಪ್ರಾಯ ಪಟ್ಟಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಎಂಟಿಸಿ ಚೀಫ್ ವಿಜಿಲೆನ್ಸ್‌ ಆಫೀಸರ್ ಪ್ರಭಾಕರ ರೆಡ್ಡಿ, “ಬಿಎಂಟಿಸಿಯಲ್ಲಿ 26 ಸಾವಿರ ಜನ ನಿರ್ವಾಹಕರು/ಚಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿತ್ಯ 5600 ಟ್ರಿಪ್ ಹೋಗುತ್ತವೆ. ಪ್ರತಿ ಬಸ್‌ ಅನ್ನು ಲೈನ್‌ ಚೆಕ್ಕಿಂಗ್ ಮಾಡುತ್ತೇವೆ. ಬಸ್‌ ಡೀಪೋಗೆ ಬಂದ ತಕ್ಷಣ ಇಟಿಎಂ ಮೆಷಿನ್ ಚೆಕ್‌ ಮಾಡುತ್ತೇವೆ. ಮಹಿಳಾ ಪ್ರಯಾಣಿಕರು ಎಷ್ಟಿದ್ದಾರೆ? ಪುರುಷ ಪ್ರಯಾಣಿಕರು ಎಷ್ಟಿದಾರೆ? ಎಷ್ಟು ಆದಾಯ ಬಂದಿದೆ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಸದ್ಯ ನಿರ್ವಾಹಕರೊಬ್ಬರು ಬೇಕಾಬಿಟ್ಟಿಯಾಗಿ ಟಿಕೆಟ್ ಹರಿದಿರುವ ಬಗ್ಗೆ ಮಾಹಿತಿ ಬಂದಿದೆ. ನಿರ್ವಾಹಕರ ವಿರುದ್ಧ ತನಿಖೆ ನಡೆಯುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...