ಶಕ್ತಿ ಯೋಜನೆ | ಬಸ್ಸುಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ಮಹಿಳೆಯರಿಗೆ ಅವಕಾಶ

Date:

Advertisements
  • ಪ್ರತಿನಿತ್ಯ 41.81 ಲಕ್ಷ ಮಹಿಳೆಯರಿಗೆ ಸಿಗಲಿದೆ ‘ಶಕ್ತಿ ಯೋಜನೆ’ ಸೌಲಭ್ಯ
  • ರಾಜ್ಯಾದ್ಯಂತ ಒಟ್ಟು 18,609 ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲನೆಯದಾಗಿ ಜಾರಿಗೆ ತಂದಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರಿಗೆ ಕರ್ನಾಟಕದಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಭಾನುವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧ ಮತ್ತು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಗೆ ತೆರಳುವ ಬಸ್‌ಗಳಿಗೆ ಹಸಿರು ನಿಶಾನೆ ತೋರಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್‌ ಪ್ರಯಾಣಿಕರು ಸೇರಿದಂತೆ) ಪಡೆಯಲಿದ್ದಾರೆ ಎಂದು ಸಾರಿಗೆ ಇಲಾಖೆ ಅಂದಾಜಿಸಿದೆ.

Advertisements

ಮುಂಗಡ ಬುಕಿಂಗ್‌ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಸೇವಾಸಿಂಧು ತಂತ್ರಾಂಶದ ಮೂಲಕ ಜೂನ್‌ 15ರಿಂದ ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಮುಂದಿನ ಮೂರು ತಿಂಗಳೊಳಗೆ ‘ಶಕ್ತಿ ಸ್ಮಾರ್ಟ್‌ ಕಾರ್ಡ್‌’ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.

ಯೋಜನೆಯ ಪ್ರಮುಖ ಅಂಶಗಳು ಇಲ್ಲಿವೆ

  • ರಾಜ್ಯದೊಳಗೆ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯ, ಅಂತರರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಆದಾಗ್ಯೂ ಅಂತರರಾಜ್ಯ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್‌ಗಳಲ್ಲಿ ರಾಜ್ಯದ ಗಡಿವರೆಗೂ ಪ್ರಯಾಣಿಸಹುದು.
  • ರಾಜ್ಯದ 6308 ನಗರ, 5958 ಸಾಮಾನ್ಯ ಹಾಗೂ 6343 ವೇಗದೂತ ಬಸ್ಸುಗಳಲ್ಲಿ (ಒಟ್ಟು 18,609 ಬಸ್ಸುಗಳಲ್ಲಿ) ಪ್ರಯಾಣಿಸಬಹುದು. ಐಷಾರಾಮಿ ಸಾರಿಗೆಗಳಲ್ಲಿ ಈ ಸೌಲಭ್ಯವಿಲ್ಲ.
  • ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್‌ ವಿತರಿಸಲು ಅಗತ್ಯ ಮಾರ್ಪಾಡುಗಳನ್ನು ಈಗಾಗಲೇ ಮಾಡಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.
  • ಗುರುತಿನ ಚೀಟಿ ಪರಿಶೀಲಿಸಿ, ಶೂನ್ಯ ಟಿಕೆಟ್‌ ವಿತರಿಸಲಾಗುತ್ತದೆ.ಈ ವೇಳೆ ಇಟಿಎಂನಲ್ಲಿ ತಾಂತ್ರಿಕ ದೋಷ ಕಂಡುಬಂದಲ್ಲಿ ಮ್ಯಾನ್ಯುವಲ್‌ ರೀತಿ ಟಿಕೆಟ್‌ ವಿತರಿಸಲಾಗುತ್ತದೆ.
  • ಯೋಜನೆಯ ವೆಚ್ಚವನ್ನುಇಟಿಎಂಗಳಲ್ಲಿ ವಿತರಿಸಲಾದ ಶೂನ್ಯ ಟಿಕೆಟ್‌/ ಶಕ್ತಿ ಸ್ಮಾರ್ಟ್‌ ಕಾರ್ಡ್‌ ದತ್ತಾಂಶ ಆಧರಿಸಿ ನಿಗಮಗಳಿಗೆ ವೆಚ್ಚ ಭರಿಸಲಾಗುವುದು.
  • ಪ್ರಸಕ್ತ ವರ್ಷದಲ್ಲಿ ನಾಲ್ಕೂ ನಿಗಮಗಳು ಸೇರಿ ಒಟ್ಟು 1894 ಹೊಸ ವಾಹನಗಳನ್ನು ಸೇರ್ಪಡೆ ಮಾಡಲು ಸರ್ಕಾರ ಯೋಜಿಸಿದೆ.
  • ಕೆಲವೊಂದು ಮಾರ್ಗಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದಲ್ಲಿ ಬಸ್ಸುಗಳ ಬೇಡಿಕೆ ಅಧಿಕವಾಗುವ ಸಾಧ್ಯತೆ ಮನಗಂಡು, ಅಂತಹ ವೇಳೆ ಬಸ್ಸುಗಳ ಕೊರತೆ ನೀಗಿಸಲು ಅನುಸೂಚಿತ ವೇಳಾಪಟ್ಟಿ/ಮಾರ್ಗ ಪರಿಷ್ಕರಣೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X