ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಬಿಎಸ್‌ಪಿ ಆಗ್ರಹ

Date:

Advertisements

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಕುರಿತು ಆಡಿದ ಅವಹೇಳಕಾರಿ ಮಾತುಗಳನ್ನು ಬಹುಜನ ಸಮಾಜ ಪಕ್ಷ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಸಚಿವ ಸಂಪುಟದಿಂದ ಅಮಿತ್‌ ಶಾ ಅವರನ್ನು ವಜಾಗೊಳಿಸಲು ಆಗ್ರಹಿಸಿದೆ.

ಈ ಕುರಿತು ಶುಕ್ರವಾರ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ರಾಜ್ಯಸಭೆ ಅಧಿವೇಶನದಲ್ಲಿ ಭಾರತೀಯ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಅಮಿತ್ ಶಾ‌ ತಮ್ಮ ಭಾಷಣದಲ್ಲಿ ʼಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಎನ್ನುವುದು ಈಗ ಒಂದು ಫ್ಯಾಷನ್ ಆಗಿಬಿಟ್ಟಿದೆ. ನೀವು ಇಷ್ಟು ಸಲ ದೇವರ ಹೆಸರು ತೆಗೆದುಕೊಂಡಿದ್ದರೆ, ಏಳೇಳು ಜನ್ಮಗಳಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತುʼ ಎಂದು ಅವಹೇಳಕಾರಿಯಾಗಿ ಮಾತನಾಡಿದ್ದು ಖಂಡನೀಯವಾಗಿದೆʼ ಎಂದರು.

Advertisements

ʼಸಾವಿರಾರು ವರ್ಷಗಳಿಂದ ಜಾತಿ ಆಧಾರದ ಮೇಲೆ ಈ ದೇಶದ ಬಹುಸಂಖ್ಯಾತರಾದ ಎಸ್ಸಿ, ಎಸ್ಟಿ, ಓಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿದ್ಯೆ, ಆಸ್ತಿ ಹಾಗೂ ಅಧಿಕಾರದಿಂದ ವಂಚಿತಗೊಳಿಸಿದ ಮನುವಾದಿ ಮೇಲ್ಟಾತಿಗೆ ಸೇರಿದ ಅಮಿತ್ ಶಾ ಹಾಗೂ ಅವರ ಆರ್‌ಎಸ್‌ಎಸ್, ಬಿಜೆಪಿ ಪಕ್ಷ ಸ್ವಾತಂತ್ರ ಸಮಾನತೆಯ ಆಶಯಗಳನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಪದೇ ಪದೇ ಬಾಬಾ ಸಾಹೇಬ್ ಅಂಬೇಡ್ಕರ್‌ ಹಾಗೂ‌ ಭಾರತೀಯ ಸಂವಿಧಾನವನ್ನು ಅವಹೇಳನ ಮಾಡುವುದು ಅವರಿಗೆ ರೂಢಿಗತವಾಗಿದೆ. ಇದನ್ನು ದೇಶದ ಬಾಬಾ ಸಾಹೇಬ್‌ ಅವರ ಅನುಯಾಯಿಗಳು ಸಹಿಸಿಕೊಳ್ಳುವುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನಬದ್ಧವಾಗಿ ರಚಿತವಾದ ಸರ್ಕಾರದಲ್ಲಿ ಗೃಹ ಸಚಿವರಾದ ಅಮಿತ್‌ ಶಾ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ವಿರುದ್ಧದ ಹೇಳಿಕೆಯಿಂದ ದೇಶದ ಕೋಟ್ಯಾಂತರ ಜನರಿಗೆ ನೋವುಂಟಾಗಿದೆ. ಇನ್ಮುಂದೆ ಅಮಿತ್‌ ಶಾ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಕೂಡಲೇ ಜಾತಿವಾದಿ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಪ್ರಕರಣ | ಸಿ ಟಿ ರವಿ ತಕ್ಷಣ ಬಿಡುಗಡೆಗೆ ಹೈಕೋರ್ಟ್‌ ಆದೇಶ

ಜಿಲ್ಲಾಧ್ಯಕ್ಷ ಕಪೀಲ್ ಗೋಡಬೊಲೆ, ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಅಶೋಕ್ ಮಂಠಾಳಕರ್, ಬಸವಕಲ್ಯಾಣ ತಾಲ್ಲೂಕಾಧ್ಯಕ್ಷ ಶಂಕರ ಫುಲೆ ಹಾಗೂ ಮಹೇಶ ಭೋಲಾ, ದತ್ತು ಸುಂಠಾಣೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X