ರಾಯಚೂರು | ಅಂಬೇಡ್ಕರ್‌ಗೆ ಅವಮಾನ : ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

Date:

ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಿರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯಸಭೆಯಲ್ಲಿ ಡಿ.18ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಅನ್ನೋದು ಈಗ ಕೆಲವರಿಗೆ ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದರೆ ಏಳೇಳು ಜನ್ಮಕೂ ಸ್ವರ್ಗ ಪ್ರಾಪ್ತಿಯಾಗುತ್ತದೆ” ಎಂದು ಮಾತನಾಡಿ ಬಾಬಾ ಸಾಹೇಬ್‌ರಿಗೆ ಘೋರ ಅವಮಾನ ಮಾಡಿದ್ದಾರೆ. ಇದು ಸಂವಿಧಾನಕ್ಕೂ ಪರೋಕ್ಷವಾಗಿ ಅವಮಾನ ಮಾಡಿದಂತೆ ಆಗಿದೆ’ ಎಂದು ತೀವ್ರವಾಗಿ ಖಂಡಿಸಿದರು.

ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ಗೃಹಮಂತ್ರಿ ಅಮಿತ್ ಶಾ ಆಡಿದ ಮಾತುಗಳಿಂದ ದೇಶದ ಕೋಟ್ಯಂತರ ಅಂಬೇಡ್ಕರ್ ಅನುಯಾಯಿಗಳ ಭಾವನೆಗೆ ದಕ್ಕೆ ತಂದಿದೆ. ಇಂತಹ ಪ್ರಚೋದನಕಾರಿ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತದೆ. ಹೀಗಾಗಿ ಅವರನ್ನು ಬಂಧಿಸಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ವಜಾಕ್ಕೆ ಕಾಂಗ್ರೆಸ್ ಆಗ್ರಹ

ಪ್ರತಿಭಟನೆಯಲ್ಲಿ ಮಾನವ ಬಂಧುತ್ವ ವೇದಿಕೆ ಮುಖಂಡ ಮೇಶಕ್ ದೊಡ್ಮನಿ , ದಲಿತ ಮುಖಂಡರು ಜಯಪ್ಪ ಗುತ್ತೇದಾರ , ಪ್ರಕಾಶ ಜಿ , ಅರಳಪ್ಪ ಯದ್ದಲದಿನ್ನಿ , ಹನುಮಂತ ಕ್ಯಾದಿಗೇರ್, ಮೌನೇಶ್ ಮರಾಠ , ಫಕೀರಪ್ಪ ಕಡದಿನ್ನಿ, ಮಲ್ಲಯ್ಯ ದೊರೆ ಹಾಗೂ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...