ಉಡುಪಿ | ಸಿಜೆಐ ಗವಾಯಿ ಮೇಲಿನ ದಾಳಿ, ಕೇವಲ ವ್ಯಕ್ತಿಯ ಮೇಲೆ ಅಲ್ಲ, ಸಂವಿಧಾನದ ಮೇಲಿನ ದಾಳಿ : ಶಾಮ್ ರಾಜ್ ಬಿರ್ತಿ

Date:

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಕಾರ್ಯ ನಡೆಯುತ್ತಿದ್ದ ವೇಳೆ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ತೀವ್ರ ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದು ಕೇವಲ ವ್ಯಕ್ತಿಯ ಮೇಲಿನ ದಾಳಿ ಅಲ್ಲ, ಭಾರತದ ಸಂವಿಧಾನದ ಮೇಲಿನ ನೇರ ದಾಳಿ. ಸನಾತನಿಗಳು ಸ್ವಾತಂತ್ರ್ಯ ದೊರೆತ ಕ್ಷಣದಿಂದಲೂ ಸಂವಿಧಾನವನ್ನು ವಿರೋಧಿಸುತ್ತಾ, ಮನುಸ್ಮೃತಿ ಆಧಾರಿತ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಯತ್ನಿಸುತ್ತಿದ್ದಾರೆ. ಇದೇ ಮನೋಭಾವದಿಂದ ಇಂತಹ ಅಘಾತಕಾರಿ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅಹಿಂಸಾವಾದಿ ಮಹಾತ್ಮ ಗಾಂಧಿಯವರನ್ನೇ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಗೆ ಈ ಸನಾತನಿಗಳು ದೇವರ ಸ್ಥಾನ ನೀಡುತ್ತಾರೆ. ಇಂತಹ ಮನೋಭಾವ ಹೊಂದಿರುವವರು ದಲಿತ ಮೂಲದ ನ್ಯಾಯಮೂರ್ತಿ ಗವಾಯಿ ಅವರ ಪೀಠದಲ್ಲಿ ಕೂತು ನ್ಯಾಯ ನೀಡುವುದನ್ನೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇದು ಅವರ ಹಿಂದುತ್ವವಾದಿ, ವೈದಿಕಶಾಹಿ ಮನೋಭಾವದ ಪ್ರತಿಬಿಂಬ ಎಂದು ಕಿಡಿ ಕಾರಿದ್ದಾರೆ.

ಅಖಂಡ ಭಾರತ, ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ಬಡಾಯಿ ಹೊಡೆಯುವ ಇಂತಹ ಸನಾತನವಾದಿಗಳ ಹೇಯ ಅಂತರಂಗವನ್ನು ಈ ಘಟನೆ ಬಯಲುಗೊಳಿಸಿದೆ. ಸಂವಿಧಾನದ ಆಶಯಗಳ ಮೇಲೆ ದಾಳಿ ನಡೆಸುವ ಇಂಥ ದೇಶದ್ರೋಹಿಗಳನ್ನು ಯುಎಪಿಎ ಕಾಯ್ದೆಯಡಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...